ADVERTISEMENT

Covid-19 India Update: 30,570 ಹೊಸ ಪ್ರಕರಣ, 431 ಸಾವು

ಪಿಟಿಐ
Published 16 ಸೆಪ್ಟೆಂಬರ್ 2021, 5:40 IST
Last Updated 16 ಸೆಪ್ಟೆಂಬರ್ 2021, 5:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 30,570 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದರೊಂದಿಗೆ ಬುಧವಾರಕ್ಕೆ ಹೋಲಿಸಿದಾಗ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಮತ್ತೊಮ್ಮೆ ಏರಿಕೆಯಾಗಿದೆ. ಕೇರಳದಲ್ಲಿ 17,681 ಸೋಂಕು ಪ್ರಕರಣಗಳು ದಾಖಲಾಗಿವೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,33,47,325ಕ್ಕೆ ತಲುಪಿದೆ. ಅದೇ ಹೊತ್ತಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,42,923ಕ್ಕೆ ಇಳಿಕೆಯಾಗಿವೆ.

ಕಳೆದ 24 ತಾಸಿನಲ್ಲಿ 431 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 4,43,928 ಮಂದಿ ಸಾವಿಗೀಡಾಗಿದ್ದಾರೆ.

ಒಟ್ಟು 3,25,60,474 ಮಂದಿ ಚೇತರಿಸಿಕೊಂಡಿದ್ದು, ಚೇತರಿಕೆ ಪ್ರಮಾಣ ಶೇ 97.64ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ. 1.93 ಆಗಿದೆ.

ಈವರೆಗೆ 76.57 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.