ADVERTISEMENT

Covid-19 India Update: 3,39,056ಕ್ಕೆ ಇಳಿದ ಸಕ್ರಿಯ ಪ್ರಕರಣ

ಪಿಟಿಐ
Published 17 ಸೆಪ್ಟೆಂಬರ್ 2021, 6:29 IST
Last Updated 17 ಸೆಪ್ಟೆಂಬರ್ 2021, 6:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 34,403 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದೆರಡು ದಿನಗಳಿಗೆ ಹೋಲಿಸಿದಾಗ ಹೊಸ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಗುರುವಾರದಂದು 30,570 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದವು.

ಹಾಗಿದ್ದರೂ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತಷ್ಟು ಇಳಿಮುಖವಾಗಿದೆ. ಕಳೆದ 24 ತಾಸಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ 8,164 ಇಳಿಕೆಯಾಗಿದ್ದು, 3,39,056ಕ್ಕೆ ತಲುಪಿದೆ.

ಅದೇ ಹೊತ್ತಿಗೆ ಕಳೆದ 24 ತಾಸಿನಲ್ಲಿ 320 ಸೋಂಕಿತರು ಮೃತಪಟ್ಟಿದ್ದಾರೆ.

ಒಟ್ಟು 3,25,98,424 ಮಂದಿ ಚೇತರಿಸಿಕೊಂಡಿದ್ದು, ಚೇತರಿಕೆ ಪ್ರಮಾಣ ಶೇ 97.65ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ. 1.97 ಆಗಿದೆ.

ಈವರೆಗೆ 77.24 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.