ADVERTISEMENT

Covid-19 India Update: 16,862 ಪ್ರಕರಣ ದೃಢ, 379 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಅಕ್ಟೋಬರ್ 2021, 5:16 IST
Last Updated 15 ಅಕ್ಟೋಬರ್ 2021, 5:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 16,862 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 379 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಇದರೊಂದಿಗೆ ಈವರೆಗೆ ಒಟ್ಟು 3,40,37,592 ಮಂದಿ ಸೋಂಕಿತರಾಗಿದ್ದು, 4,51,814 ಮಂದಿ ಸಾವಿಗೀಡಾಗಿದ್ದಾರೆ. 3,33,82,100 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಚೇತರಿಕೆ ದರ ಶೇ 98.07ರಷ್ಟಿದೆ.

ದೈನಂದಿನ ಪ್ರಕರಣಗಳ ಸಂಖ್ಯೆ ಕಳೆದ 21 ದಿನಗಳಿಂದ 30 ಸಾವಿರಕ್ಕಿಂತ ಕಡಿಮೆ ವರದಿಯಾಗಿದೆ.

ADVERTISEMENT

ಸದ್ಯ ದೇಶದಲ್ಲಿ 2,03,678 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 97,14,38,553 ಡೋಸ್ ಕೋವಿಡ್‌ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.