ADVERTISEMENT

ದೇಶದಾದ್ಯಂತ 95 ಕೋಟಿ ಡೋಸ್‌ ಕೋವಿಡ್‌ ಲಸಿಕೆ ವಿತರಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಅಕ್ಟೋಬರ್ 2021, 16:32 IST
Last Updated 10 ಅಕ್ಟೋಬರ್ 2021, 16:32 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ:ದೇಶದಾದ್ಯಂತ ಇದುವರೆಗೆ ಒಟ್ಟು95 ಕೋಟಿ ಡೋಸ್‌ ಕೋವಿಡ್‌ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

Co-WIN ಪೋರ್ಟಲ್‌ನಲ್ಲಿನ ಅಂಕಿ-ಅಂಶದ ಪ್ರಕಾರ, ಭಾನುವಾರ ಒಂದೇದಿನ ಸಂಜೆ 7ರ ವರೆಗೆ ಒಟ್ಟು 44 ಲಕ್ಷ ಡೋಸ್‌ ಲಸಿಕೆ ನೀಡಲಾಗಿದೆ.

ದೇಶದಾದ್ಯಂತ ಜನವರಿ16 ರಿಂದ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ವಿತರಿಸುವ ಮೂಲಕ ಅಭಿಯಾನ ಆರಂಭಿಸಲಾಯಿತು. ಫೆಬ್ರುವರಿ2ರ ಬಳಿಕಮುಂಚೂಣಿ ಕಾರ್ಯಕರ್ತರಿಗೆ ಎರಡನೇ ಹಂತದಲ್ಲಿ ಲಸಿಕೆ ನೀಡಲಾಗಿತ್ತು.

ADVERTISEMENT

ಮಾರ್ಚ್‌1ರಿಂದ ಮೂರನೇ ಹಂತದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ, ಏಪ್ರಿಲ್‌ 1ರ ಬಳಿಕ 45 ವರ್ಷ ಮೇಲಿನವರಿಗೆಲಸಿಕೆ ವಿತರಿಸಲಾಯಿತು.

ಮೇ1ರಿಂದ18 ವರ್ಷ ಮೇಲ್ಪಟ್ಟಎಲ್ಲರಿಗೂ ಲಸಿಕೆ ನೀಡಲು ಅವಕಾಶ ಕಲ್ಪಿಸುವ ಮೂಲಕ ಸರ್ಕಾರವು ಅಭಿಯಾನವನ್ನು ವಿಸ್ತರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.