ADVERTISEMENT

ಕಾರುಗಳಲ್ಲಿ ಏರ್‌ಬ್ಯಾಗ್ ಕಡ್ಡಾಯ ನಿಯಮ: ಒಂದು ವರ್ಷ ಮುಂದೂಡಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಸೆಪ್ಟೆಂಬರ್ 2022, 9:48 IST
Last Updated 29 ಸೆಪ್ಟೆಂಬರ್ 2022, 9:48 IST
ಏರ್‌ಬ್ಯಾಗ್
ಏರ್‌ಬ್ಯಾಗ್    

ನವದೆಹಲಿ:ಪ್ರಯಾಣಿಕರ ಕಾರುಗಳಿಗೆ ಕನಿಷ್ಠ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯ ಮಾಡುವ ಅವಧಿಯನ್ನು ಮುಂದಿನ ಒಂದು ವರ್ಷ ವಿಸ್ತರಿಸಲಾಗಿದೆ.

ಈ ಕುರಿತು ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ. ಅಕ್ಟೋಬರ್ 2023 ರಿಂದ ಆರು ಏರ್ ಬ್ಯಾಗ್ ಕಡ್ಡಾಯ ಜಾರಿಗೆ ಬರಲಿದೆ.

ಕೇಂದ್ರ ಸರ್ಕಾರ ಇದೇ ಅಕ್ಟೋಬರ್ 1 ರಿಂದ 8 ಸೀಟುಗಳು ಇರುವಂತಹ ಕಾರುಗಳಲ್ಲಿ ಕನಿಷ್ಠ 6 ಏರ್‌ಬ್ಯಾಗ್‌ಗಳು ಇರಲೇಬೇಕು ಎಂಬ ನಿಯಮವನ್ನು ಜಾರಿಗೊಳಿಸಲಾಗುತ್ತದೆ ಎಂದು ಹೇಳಿತ್ತು.

ADVERTISEMENT

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಚಿವರು, ಜಾಗತಿಕ ಆಟೋ ಪೂರೈಕೆ ಸರಪಳಿಯು ಹಲವಾರು ತೊಂದರೆಗಳನ್ನು ಅನುಭವಿಸುತ್ತಿದೆ. ಇದು ಸ್ಥೂಲ ಆರ್ಥಿಕತೆಯ ಮೇಲೂ ಪರಿಣಾಮವಾಗುತ್ತಿದೆ. ಹೀಗಾಗಿ ಈ ಕೂಡಲೇ ಏರ್‌ಬ್ಯಾಗ್‌ ಕಡ್ಡಾಯ ಮಾಡುವ ಪ್ರಸ್ತಾವನೆಯನ್ನು ಒಂದು ವರ್ಷ ಮುಂದೂಡುತ್ತಿದ್ದೇವೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಪ್ರಯಾಣಿಕರ ವಾಹನಗಳಲ್ಲಿ ಆಟೋ ಕಂಪನಿಗಳು ವೆಚ್ಚ ಮತ್ತು ಭಿನ್ನತೆ ನೋಡದೆ ಅತ್ಯಂತ ಉನ್ನತಮಟ್ಟದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಅವುಗಳ ಆದ್ಯ ಕರ್ತವ್ಯವಾಗಿರುತ್ತದೆ ಎಂದು ಗಡ್ಕರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.