ADVERTISEMENT

ಎರಡು ಬಾರಿ ರಾಜ್ಯಸಭಾ ಸ್ಥಾನ ತಿರಸ್ಕರಿಸಿದ್ದೇನೆ: ನಟ ಸೋನು ಸೂದ್‌  

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಸೆಪ್ಟೆಂಬರ್ 2021, 13:06 IST
Last Updated 20 ಸೆಪ್ಟೆಂಬರ್ 2021, 13:06 IST
ಸೋನು ಸೂದ್‌
ಸೋನು ಸೂದ್‌   

ನವದೆಹಲಿ: ಕೋವಿಡ್ ನಂತರದ ಕಾಲಘಟ್ಟದಲ್ಲಿ ನಾನು ಎರಡು ಬಾರಿ ರಾಜ್ಯಸಭಾ ಸ್ಥಾನವನ್ನು ನಿರಾಕರಿಸಿದ್ದೇನೆ ಎಂದು ಬಾಲಿವುಡ್ ನಟ ಸೋನು ಸೂದ್‌ ಅವರು ಹೇಳಿಕೊಂಡಿದ್ದಾರೆ.

ಸೋಮವಾರ ಇಂಗ್ಲಿಷ್‌ ಸುದ್ದಿ ವಾಹಿನಿ ‘ಎನ್‌ಡಿಟಿವಿ’ಗೆ ನೀಡಿರುವ ಸಂದರ್ಶನದಲ್ಲಿ ಅವರು ಈ ವಿಷಯ ಬಹಿರಂಗಪಡಿಸಿದ್ದಾರೆ.

‘ನನಗೆ ಕಳೆದ 10 ವರ್ಷಗಲ್ಲಿ ಬೇರೆ ಬೇರೆ ರಾಜಕೀಯ ಪಕ್ಷಗಳಿಂದ ವಿವಿಧ ರಾಜಕೀಯ ಹುದ್ದೆಗಳ ಅವಕಾಶ ಬಂದಿದೆ. ಕೋವಿಡ್ -19 ನಂತರದ ಕಾಲಘಟ್ಟದಲ್ಲಿ ಎರಡು ಬಾರಿ ರಾಜ್ಯಸಭಾ ಸ್ಥಾನವನ್ನು ನಾನು ತಿರಸ್ಕರಿಸಿದ್ದೇನೆ,‘ ಎಂದು ಅವರು ಅವರು ಹೇಳಿದ್ದಾರೆ.

ADVERTISEMENT

‘ಮಾನಸಿಕವಾಗಿ ನಾನು ಸಿದ್ಧವಾಗಿಲ್ಲ. ನಾನು ರಾಜಕೀಯ ಪ್ರವೇಶಿಸಲು ಯೋಚಿಸಿದರೆ, ಬಹಿರಂಗವಾಗಿಯೇ ಹೇಳುತ್ತೇನೆ,‘ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.