ADVERTISEMENT

Covid-19 India Update: ದೇಶದಲ್ಲಿ 30,773 ಹೊಸ ಪ್ರಕರಣ, 309 ಜನ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಸೆಪ್ಟೆಂಬರ್ 2021, 4:46 IST
Last Updated 19 ಸೆಪ್ಟೆಂಬರ್ 2021, 4:46 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 30,773 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 309 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 3,34,48,163 ಕ್ಕೆ ಏರಿಕೆಯಾಗಿದೆ. ಆ ಪೈಕಿ 4,44,838 ಮಂದಿ ಮೃತಪಟ್ಟಿದ್ದಾರೆ.

ಇದುವರೆಗೆ 3,26,71,167 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3,32,158 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಸಕ್ರಿಯ ಪ್ರಕರಣಗಳು ಒಟ್ಟು ಸೋಂಕಿನ ಶೇಕಡಾ 0.99 ರಷ್ಟಿದ್ದು, ದೇಶದ ಕೋವಿಡ್-19 ಚೇತರಿಕೆ ಪ್ರಮಾಣವು ಶೇಕಡಾ 97.68 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಶನಿವಾರದ ವೇಳೆ ಒಟ್ಟು 55,23,40,168 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ನಿನ್ನೆ ಒಂದೇ ದಿನ ದೇಶದಲ್ಲಿ 15,59,895 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 85,42,732 ಜನರಿಗೆ ಲಸಿಕೆ ನೀಡುವ ಮೂಲಕ ಈವರೆಗೆ ಲಸಿಕೆ ಪಡೆದುಕೊಂಡವರ ಸಂಖ್ಯೆ 80,43,72,331ಕ್ಕೆ ಏರಿಕೆಯಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.