ADVERTISEMENT

Covid-19 India Update: 24 ಗಂಟೆಗಳಲ್ಲಿ 30,256 ಹೊಸ ಪ್ರಕರಣ, 295 ಜನ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಸೆಪ್ಟೆಂಬರ್ 2021, 4:31 IST
Last Updated 20 ಸೆಪ್ಟೆಂಬರ್ 2021, 4:31 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 30,256 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 295 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 3,34,78,419 ಕ್ಕೆ ಏರಿಕೆಯಾಗಿದೆ. ಆ ಪೈಕಿ 4,45,133 ಮಂದಿ ಮೃತಪಟ್ಟಿದ್ದಾರೆ.

ಇದುವರೆಗೆ ದೇಶದಲ್ಲಿ 3,27,15,105 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3,18,181 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಭಾನುವಾರದ ಹೊತ್ತಿಗೆ ಒಟ್ಟು 55,36,21,766 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ನಿನ್ನೆ ಒಂದೇ ದಿನ ದೇಶದಲ್ಲಿ 11,77,607 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 37,78,296 ಜನರಿಗೆ ಲಸಿಕೆ ನೀಡುವ ಮೂಲಕ ಈವರೆಗೆ ಲಸಿಕೆ ಪಡೆದುಕೊಂಡವರ ಸಂಖ್ಯೆ 80,85,68,144ಕ್ಕೆ ಏರಿಕೆಯಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.