ADVERTISEMENT

India Covid-19 Update: 29 ಸಾವಿರ ಕೋವಿಡ್‌ ಹೊಸ ಪ್ರಕರಣಗಳು ವರದಿ

ಪಿಟಿಐ
Published 25 ಸೆಪ್ಟೆಂಬರ್ 2021, 6:10 IST
Last Updated 25 ಸೆಪ್ಟೆಂಬರ್ 2021, 6:10 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಶನಿವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡ 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್‌–19ನ 29,616 ಹೊಸ ಪ್ರಕರಣಗಳು ವರದಿಯಾಗಿವೆ.

ಈ ಮೂಲಕ ದೇಶದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 3,36,24,419ಕ್ಕೆ ಏರಿದಂತಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಪ್ರಕಟಣೆ ತಿಳಿಸಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಇದೇ ಅವಧಿಯಲ್ಲಿ 1,280 ಹೊಸ ಪ್ರಕರಣಗಳೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,01,4421ಕ್ಕೇರಿದಂತಾಗಿದೆ. ಒಟ್ಟು ಸೋಂಕಿನ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.90ರಷ್ಟು ಎಂದು ಸಚಿವಾಲಯ ತಿಳಿಸಿದೆ.

ADVERTISEMENT

ಇದೇ ಅವಧಿಯಲ್ಲಿ ಕೋವಿಡ್‌ನಿಂದ 290 ಮಂದಿ ಸಾವನ್ನಪ್ಪಿದ್ದು, ಸೋಂಕಿನಿಂದ ಸತ್ತವರ ಸಂಖ್ಯೆ 4,46,658ಕ್ಕೆ ಏರಿದಂತಾಗಿದೆ. ಕೋವಿಡ್‌ನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಶೇ 97.78ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.