ADVERTISEMENT

Covid-19 India Update| ಇಂದು 15,981 ಪ್ರಕರಣ, 166 ಮಂದಿ ಸಾವು 

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಅಕ್ಟೋಬರ್ 2021, 5:23 IST
Last Updated 16 ಅಕ್ಟೋಬರ್ 2021, 5:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ದೆಹಲಿ:ಭಾರತದಲ್ಲಿ ಇಂದು 15,981 ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 166 ಮಂದಿ ಮೃತಪಟ್ಟಿದ್ದಾರೆ.

ಒಂದು ದಿನದ ಈ ಅವಧಿಯಲ್ಲಿ17,861 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಇನ್ನು ಭಾರತದ ಒಟ್ಟಾರೆ ಸೋಂಕು ಪ್ರಕರಣ ಅ.16ರ ಹೊತ್ತಿಗೆ 3,40,53,573ಗೆ ತಲುಪಿದ್ದು, ಸದ್ಯ 2,01,632 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಈ ವರೆಗೆ 3,33,99,961 ಗುಣಮುಖರಾಗಿದ್ದು, ಸಾವಿನ ಸಂಖ್ಯೆ 4,51,980 ಕ್ಕೆ ತಲುಪಿದೆ.

ದೇಶದಲ್ಲಿ ಈ ವರೆಗೆ 97,23,77,045 ಮಂದಿಗೆ ಲಸಿಕೆ ಹಾಕಲಾಗಿದೆ. 24 ಗಂಟೆಗಳ ಅವಧಿಯಲ್ಲಿ 8,36,118 ಮಂದಿಗೆ ಲಸಿಕೆ ಹಾಕಲಾಗಿದೆ.

ಕೇರಳದಲ್ಲಿ ಶುಕ್ರವಾರ ಸಂಜೆ ಬಿಡುಗಡೆಯಾದ ಆರೋಗ್ಯ ಇಲಾಖೆ ಬುಲೆಟಿನ್‌ ಪ್ರಕಾರ ಒಂದು ದಿನದ ಅವಧಿಯಲ್ಲಿ8,867 ಪ್ರಕರಣಗಳು ವರದಿಯಾಗಿವೆ. ಇದು ದೇಶದ ಒಟ್ಟಾರೆ ಪ್ರಕರಣಗಳಲ್ಲಿ ಅರ್ಧಕ್ಕಿಂತಲೂ ಹೆಚ್ಚು. ಇದೇ ವೇಳೆ ಅಲ್ಲಿ 67 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.