ADVERTISEMENT

Covid-19 India Update: ದೇಶದಾದ್ಯಂತ 2,64,458 ಪ್ರಕರಣಗಳು ಸಕ್ರಿಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಅಕ್ಟೋಬರ್ 2021, 4:11 IST
Last Updated 4 ಅಕ್ಟೋಬರ್ 2021, 4:11 IST
ತಿರುವನಂತಪುರಂ: ಕೊರೊನಾ ವೈರಸ್ ಸೋಂಕು ತಡೆಗೆ ಮಾಸ್ಕ್‌ ಧರಿಸುವುದನ್ನು ಪ್ರಚುರ ಪಡಿಸುವ ಗೋಡೆ ಚಿತ್ರದ ಮುಂದೆ ಮಾಸ್ಕ್‌ ಧರಿಸಿರುವ ವ್ಯಕ್ತಿಯೊಬ್ಬರು ಹಾದು ಹೋದರು
ತಿರುವನಂತಪುರಂ: ಕೊರೊನಾ ವೈರಸ್ ಸೋಂಕು ತಡೆಗೆ ಮಾಸ್ಕ್‌ ಧರಿಸುವುದನ್ನು ಪ್ರಚುರ ಪಡಿಸುವ ಗೋಡೆ ಚಿತ್ರದ ಮುಂದೆ ಮಾಸ್ಕ್‌ ಧರಿಸಿರುವ ವ್ಯಕ್ತಿಯೊಬ್ಬರು ಹಾದು ಹೋದರು   

ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 20,799 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 180 ಮಂದಿ ಮೃತಪಟ್ಟಿದ್ದಾರೆ. ಇದೇ ಅವಧಿಯಲ್ಲಿ 26,718 ಮಂದಿ ಚೇತರಿಸಿಕೊಂಡಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಕೇರಳದಲ್ಲಿ ಭಾನುವಾರ ಸಂಜೆವರೆಗೂ ಕೋವಿಡ್‌ ದೃಢಪಟ್ಟ 12,297 ಹೊಸ ಪ್ರಕರಣಗಳು ವರದಿಯಾಗಿವೆ ಹಾಗೂ 74 ಸೋಂಕಿತರು ಮೃತಪಟ್ಟಿದ್ದಾರೆ.

ಭಾರತದಲ್ಲಿ ಪ್ರಸ್ತುತ 2,64,458 ಪ್ರಕರಣಗಳು ಸಕ್ರಿಯವಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 3.38 ಕೋಟಿಗೆ ಏರಿಕೆಯಾಗಿದ್ದು, ಈ ಪೈಕಿ 3,31,21,247 ಮಂದಿ ಗುಣಮುಖರಾಗಿದ್ದಾರೆ ಹಾಗೂ 4,48,997 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ಈವರೆಗೂ ದೇಶದಲ್ಲಿ ಒಟ್ಟು 90,79,32,861 ಡೋಸ್‌ ಕೋವಿಡ್‌ ಲಸಿಕೆ ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.