ADVERTISEMENT

Covid-19 India Update: ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಸೆಪ್ಟೆಂಬರ್ 2021, 5:05 IST
Last Updated 18 ಸೆಪ್ಟೆಂಬರ್ 2021, 5:05 IST
ಬೆಂಗಳೂರಿನಲ್ಲಿ ಆರೋಗ್ಯ ಸಿಬ್ಬಂದಿ ಸಾರ್ವಜನಿಕರಿಗೆ ಕೋವಿಡ್‌ ಲಸಿಕೆ ನೀಡಿದರು. –ಪ್ರಜಾವಾಣಿ ಚಿತ್ರ / ಬಿ.ಎಚ್.ಶಿವಕುಮಾರ್
ಬೆಂಗಳೂರಿನಲ್ಲಿ ಆರೋಗ್ಯ ಸಿಬ್ಬಂದಿ ಸಾರ್ವಜನಿಕರಿಗೆ ಕೋವಿಡ್‌ ಲಸಿಕೆ ನೀಡಿದರು. –ಪ್ರಜಾವಾಣಿ ಚಿತ್ರ / ಬಿ.ಎಚ್.ಶಿವಕುಮಾರ್   

ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 35,662 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 33,415,889 ಕ್ಕೆ ಏರಿಕೆಯಾಗಿದೆ. ಆ ಪೈಕಿ 444,563 ಮಂದಿ ಮೃತಪಟ್ಟಿದ್ದಾರೆ.

ಇದುವರೆಗೆ 3,26,32,222 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3,40,639 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಕೇರಳದಲ್ಲಿ 1,86,754, ಮಹಾರಾಷ್ಟ್ರದಲ್ಲಿ 52,893, ತಮಿಳುನಾಡಿನಲ್ಲಿ 16,756, ಕರ್ನಾಟಕದಲ್ಲಿ 16,202, ಆಂಧ್ರಪ್ರದೇಶಲ್ಲಿ 14,708 ಸಕ್ರಿಯ ಪ್ರಕರಣಗಳಿವೆ.

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ದೇಶದಾದ್ಯಂತ ವಿಶೇಷ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಇದರಿಂದಾಗಿ ಶುಕ್ರವಾರ ಒಂದೇ ದಿನ 2.5 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.