ADVERTISEMENT

ಗುಜರಾತ್‌: ₹200 ಕೋಟಿ ಮೌಲ್ಯದ ಹೆರಾಯಿನ್‌ ವಶ, 7 ಮಂದಿ ಬಂಧನ

ಪಿಟಿಐ
Published 19 ಸೆಪ್ಟೆಂಬರ್ 2021, 13:11 IST
Last Updated 19 ಸೆಪ್ಟೆಂಬರ್ 2021, 13:11 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಅಹಮದಾಬಾದ್: ಗುಜರಾತ್ ಕರಾವಳಿಯಲ್ಲಿ ಹೆರಾಯಿನ್‌ ತುಂಬಿದ್ದ ದೋಣಿಯೊಂದನ್ನು ವಶಕ್ಕೆ ಪಡೆದಿದ್ದು, ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಪ್ತಚರ ಮಾಹಿತಿ ಆಧಾರಿಸಿ ಗುಜರಾತ್‌ ಪೊಲೀಸರು ಮತ್ತು ಭಯೋತ್ಪಾದನಾ ನಿಗ್ರಹ ದಳ ನಡೆಸಿದ ಜಂಟಿ ಕಾರ್ಯಾಚರಣೆ ನಡೆಸಿ ಹೆರಾಯಿನ್‌ ವಶಪಡಿಸಿಕೊಂಡಿವೆ.

ಬಂಧಿತ ಆರೋಪಿಗಳು ಹೆರಾಯಿನ್ ಕಳ್ಳಸಾಗಾಣಿಕೆಗೆ ಯತ್ನಿಸಿದ್ದರು ಎಂಬ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲಾಯಿತು ಎಂದು ಗುಜರಾತಿನ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಡಿಐಜಿ ಹಿಮಾಂಶು ಶುಕ್ಲಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.