ADVERTISEMENT

ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿಗೆ ಬಹುಮತ, ಧನ್ಯವಾದ ಸಲ್ಲಿಸಿದ ನಡ್ಡಾ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 11:43 IST
Last Updated 5 ಅಕ್ಟೋಬರ್ 2021, 11:43 IST
ಜೆ.ಪಿ. ನಡ್ಡಾ
ಜೆ.ಪಿ. ನಡ್ಡಾ   

ನವದೆಹಲಿ: ‘ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯು ಭಾರೀ ಬಹುಮತವನ್ನು ಗಳಿಸಿದೆ. ಗುಜರಾತಿನ ಜನರ ನಿರಂತರ ಬೆಂಬಲ ಮತ್ತು ಆಶೀರ್ವಾದಕ್ಕಾಗಿ ನಾನು ಧನ್ಯವಾದ ಸಲ್ಲಿಸುತ್ತೇನೆ’ ಎಂದು ಬಿಜೆಪಿ ರಾಷ್ಟ್ರ ಘಟಕದ ಅಧ್ಯಕ್ಷ ಜೆ.ಪಿ. ನಡ್ಡಾ ಮಂಗಳವಾರ ಟ್ವೀಟ್‌ ಮಾಡಿದ್ದಾರೆ.

‘ಈ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಭೂಪೇಂದ್ರ ಅವರಿಗೂ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಿ.ಆರ್. ಪಾಟೀಲ್ ಅವರಿಗೂ ಹಾಗೂ ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ’ ಎಂದೂ ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

‘ಈ ಫಲಿತಾಂಶವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ಬಿಜೆಪಿ ಕಲ್ಯಾಣ ನೀತಿಗಳಲ್ಲಿ ಜನರಿಗೆ ಇರುವ ವಿಶ್ವಾಸವನ್ನು ತೋರಿಸುತ್ತದೆ. ರಾಜ್ಯದ ಸುಸ್ಥಿರ ಅಭಿವೃದ್ಧಿಗೆ ಮತ್ತು ಜನರಿಗೆ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಲು ಬಿಜೆಪಿ ಸರ್ಕಾರವು ಬದ್ಧವಾಗಿದೆ ಎಂದು ನಾನು ಮತ್ತೊಮ್ಮೆ ಭರವಸೆ ನೀಡುತ್ತೇನೆ’ ಎಂದೂ ನಡ್ಡಾ ಅವರು ಮತ್ತೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.