ADVERTISEMENT

ಮಮತಾಗೆ ಭಾರಿ ಅಂತರದ ಗೆಲುವಾಗಲಿದೆ ಎಂದ ಬಿಜೆಪಿ ನಾಯಕ ರಾಜೀವ್ ಬ್ಯಾನರ್ಜಿ

ಐಎಎನ್ಎಸ್
Published 21 ಸೆಪ್ಟೆಂಬರ್ 2021, 16:15 IST
Last Updated 21 ಸೆಪ್ಟೆಂಬರ್ 2021, 16:15 IST
ಮಮತಾ ಬ್ಯಾನರ್ಜಿ (ಎಎಫ್‌ಪಿ ಸಂಗ್ರಹ ಚಿತ್ರ)
ಮಮತಾ ಬ್ಯಾನರ್ಜಿ (ಎಎಫ್‌ಪಿ ಸಂಗ್ರಹ ಚಿತ್ರ)   

ಕೋಲ್ಕತ್ತ: ‘ಭವಾನಿಪುರ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾರಿ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಅವರ ವಿರುದ್ಧ ನಾವು ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೇ ಒಳ್ಳೆಯದಿತ್ತು’ ಎಂದು ಬಿಜೆಪಿ ನಾಯಕ ರಾಜೀವ್ ಬ್ಯಾನರ್ಜಿ ಹೇಳಿದ್ದಾರೆ.

‘ಜನರು ಅವರ (ಮಮತಾ) ಪರ ಆದೇಶ ನೀಡಿದ್ದಾರೆ. ಅವರು 213 ಸ್ಥಾನಗಳೊಂದಿಗೆ ಅಧಿಕಾರಕ್ಕೇರಿದ್ದಾರೆ. ಮಮತಾ ಅವರು ಭವಾನಿಪುರದಿಂದ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಅವರ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಜನರ ಆದೇಶವನ್ನು ನಾವು ತಿರಸ್ಕರಿಸಲಾಗದು. ಅವರು ಮುಖ್ಯಮಂತ್ರಿಯಾಗಿರಬೇಕು ಎಂದು ಜನ ಬಯಸುತ್ತಿದ್ದಾರೆ. ಬಿಜೆಪಿಯೂ ಚುನಾವಣೆಯಿಂದ ಹಿಂದೆ ಸರಿದಿದ್ದರೆ ಸರಿಯಾದ ಸಂದೇಶ ರವಾನೆಯಾಗುತ್ತಿತ್ತು’ ಎಂದು ರಾಜೀವ್ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.

ರಾಜೀವ್ ಬ್ಯಾನರ್ಜಿ ಹಿಂದೆ ಟಿಎಂಸಿ ಸರ್ಕಾರದಲ್ಲಿ ಸಚಿವರಾಗಿದ್ದು, ವಿಧಾನಸಭೆ ಚುನಾವಣೆಗೂ ಮುನ್ನ ಪಕ್ಷ ತೊರೆದು ಬಿಜೆಪಿ ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.