ADVERTISEMENT

ಮುಂಬೈ : 18ರಿಂದ 44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ ಸ್ಥಗಿತ

ಪಿಟಿಐ
Published 13 ಮೇ 2021, 2:40 IST
Last Updated 13 ಮೇ 2021, 2:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ : ಮುಂಬೈನಲ್ಲಿ 18ರಿಂದ 44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ ಅಭಿಯಾನವನ್ನು ಮುಂದಿನ ನಿರ್ದೇಶನದ ವರೆಗೂ ಸ್ಥಗಿತಗೊಳಿಸಲಾಗಿದೆ ಎಂದು ಬೃಹನ್‌ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಪ್ರಕಟಿಸಿದೆ.

ಕೋವಿಡ್ ಲಸಿಕೆಯ ಕೊರತೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರವು 18ರಿಂದ 44 ವರ್ಷ ವಯೋಮಿತಿಯ ನಾಗರಿಕರಿಗೆ ಕೋವಿಡ್ ಲಸಿಕೆಯ ನೀಡಿಕೆಯನ್ನು ಸ್ಥಗಿತಗೊಳಿಸಿತ್ತು. ಅಲ್ಲದೆ 45 ವರ್ಷ ದಾಟಿದವರಿಗೆ ಎರಡನೇ ಲಸಿಕೆ ನೀಡಲು ಆದ್ಯತೆ ನೀಡಲಾಗಿದೆ.

ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿದ ಬಿಎಂಸಿ, 60ವರ್ಷಕ್ಕೂ ಮೇಲ್ಪಟ್ಟವರಿಗೆ ಮೂರು ದಿನಗಳ ವರೆಗೆ ಲಸಿಕೆ ಹಾಕಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿತ್ತು.

ADVERTISEMENT

ಈ ಕುರಿತು ಟ್ವೀಟ್ ಮಾಡಿರುವ ಪರಿಸರ ಸಚಿವ ಆದಿತ್ಯ ಠಾಕ್ರೆ ಎರಡು ಲಸಿಕೆಗಳ ನಡುವಣ ನಿಗದಿತ ಅಂತರವನ್ನು ಮೀರಿದವರಿಗೆ ಮುಂಬರುವ ವಾರದಲ್ಲಿ ನಾವು ಎರಡನೇ ಲಸಿಕೆ ನೀಡುವುದು ಬಹಳ ಮುಖ್ಯವೆನಿಸಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲೂ 18ರಿಂದ 44 ವರ್ಷ ವಯೋಮಾನದವರಿಗೆ ಲಸಿಕೆ ಹಾಕುವ ಅಭಿಯಾನವನ್ನು ಮೇ 15ರಿಂದ ತಾತ್ಕಾಲಿಕವಾಗಿ ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.