ADVERTISEMENT

ಪಾಕಿಸ್ತಾನದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಏರಿಕೆ; ಆ. 8ರವರೆಗೆ ಲಾಕ್‌ಡೌನ್

ಏಜೆನ್ಸೀಸ್
Published 31 ಜುಲೈ 2021, 12:36 IST
Last Updated 31 ಜುಲೈ 2021, 12:36 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಇಸ್ಲಾಮಾಬಾದ್: ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಸರ್ಕಾರ ವಾಣಿಜ್ಯ ನಗರಿ ಕರಾಚಿ, ದಕ್ಷಿಣ ಸಿಂಧ್ ಪ್ರಾಂತ್ಯ ಮತ್ತು ಇತರೆ ನಗರ ಕೇಂದ್ರಗಳಲ್ಲಿ ಆಗಸ್ಟ್‌8ರವರೆಗೆ ಲಾಕ್‌ಡೌನ್‌ ಜಾರಿಗೊಳಿಸಿದೆ.

ಶನಿವಾರದಿಂದಲೇ ಲಾಕ್‌ಡೌನ್ ಆರಂಭವಾಗಲಿದೆ. ಲಾಕ್‌ಡೌನ್‌ಗೆ ಸ್ಥಳೀಯ ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

‘ಕೋವಿಡ್‌–19 ಸೋಂಕಿನ ಪ್ರಕರಣ ದಿಢೀರನೆ ಹೆಚ್ಚಾಗಿದ್ದು, ರಾಜಧಾನಿ ಕರಾಚಿ ಆಸ್ಪತ್ರೆಗಳೆಲ್ಲ ಭರ್ತಿಯಾಗಿವೆ’ ಎಂದು ಸಿಂಧ್‌ ಪ್ರಾಂತ್ಯದ ಮುಖ್ಯಮಂತ್ರಿ ಮುರಾದ್ ಅಲಿ ಶಾ ತಿಳಿಸಿದ್ದಾರೆ.

ADVERTISEMENT

ಔಷಧಿ ಅಂಗಡಿಗಳು, ಬೇಕರಿಗಳು, ಗ್ಯಾಸ್ ಕೇಂದ್ರಗಳು ಮತ್ತು ಕಿರಾಣಿ ಅಂಗಡಿಗಳನ್ನು ಹೊರತುಪಡಿಸಿ ಸಿಂಧ್ ಪ್ರಾಂತೀಯ ಸರ್ಕಾರ ಎಲ್ಲಾ ಮಾರುಕಟ್ಟೆಗಳನ್ನು ಮುಚ್ಚುತ್ತಿದೆ. ಬೇಕರಿ, ಕಿರಾಣಿ ಅಂಗಡಿಗಳನ್ನು ಸಂಜೆ 6 ಗಂಟೆಯೊಳಗೆ ಮುಚ್ಚುವಂತೆ ಸೂಚಿಸಲಾಗಿದೆ.

ನಗರಗಳ ನಡುವಿನ ಎಲ್ಲಾ ಸಾರಿಗೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕ ಬಸ್‌ಗಳು ಕಾರ್ಯನಿರ್ವಹಿಸುತ್ತಿಲ್ಲ. ಇಬ್ಬರು ಪ್ರಯಾಣಿಕರೊಂದಿಗೆ ಖಾಸಗಿ ಕಾರುಗಳು ಮತ್ತು ಟ್ಯಾಕ್ಸಿಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿರುವ ಪರೀಕ್ಷೆಗಳನ್ನು ಸಹ ಲಾಕ್‌ಡೌನ್ ಕಾರಣದಿಂದ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.