ADVERTISEMENT

ಪಂಜಾಬ್‌: ಸ್ವರ್ಣಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ಚನ್ನಿ, ಸಿಧು

ಪಿಟಿಐ
Published 22 ಸೆಪ್ಟೆಂಬರ್ 2021, 6:10 IST
Last Updated 22 ಸೆಪ್ಟೆಂಬರ್ 2021, 6:10 IST
ಪಂಜಾಬ್‌ ನೂತನ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್ ಚನ್ನಿ, ಪಿಪಿಸಿಸಿ ಅಧ್ಯಕ್ಷ ನವಜೋತ್‌ ಸಿಂಗ್ ಸಿಧು ಮತ್ತಿತರ ನಾಯಕರು ಬುಧವಾರ ಅಮೃತಸರದ ಸ್ವರ್ಣಮಂದಿರಕ್ಕೆ ಭೇಟಿ ನೀಡಿದರು.
ಪಂಜಾಬ್‌ ನೂತನ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್ ಚನ್ನಿ, ಪಿಪಿಸಿಸಿ ಅಧ್ಯಕ್ಷ ನವಜೋತ್‌ ಸಿಂಗ್ ಸಿಧು ಮತ್ತಿತರ ನಾಯಕರು ಬುಧವಾರ ಅಮೃತಸರದ ಸ್ವರ್ಣಮಂದಿರಕ್ಕೆ ಭೇಟಿ ನೀಡಿದರು.   

ಚಂಡೀಗಡ: ಪಂಜಾಬ್‌ನ ನೂತನ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್ ಚನ್ನಿ ಅವರು ತಮ್ಮ ಇಬ್ಬರು ಸಹೋದ್ಯೋಗಿಗಳು ಮತ್ತು ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷ ನವಜೋತ್‌ಸಿಂಗ್‌ ಸಿಧು ಅವರೊಂದಿಗೆ ಬುಧವಾರ ಅಮೃತಸರದಲ್ಲಿರುವ ಸ್ವರ್ಣ ಮಂದಿರಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.

ಚನ್ನಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಧಾರ್ಮಿಕ ಕ್ಷೇತ್ರವೊಂದಕ್ಕೆ ಭೇಟಿ ನೀಡಿದ್ದಾರೆ.

ಉಪಮುಖ್ಯಮಂತ್ರಿಗಳಾದ ಸುಖ್‌ಜಿಂದರ್‌ ಸಿಂಗ್ ರಂಧಾವ ಮತ್ತು ಒ.ಪಿ ಸೋನಿ ಕೂಡ ಇದ್ದರು. ಇದೇ ವೇಳೆ ದುರ್ಗಿಯಾನ ದೇವಾಲಯಕ್ಕೂ ಭೇಟಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.