ADVERTISEMENT

ಪಂಜಾಬ್‌ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭದಲ್ಲಿ ರಾಹುಲ್‌ ಭಾಗಿ ಸಾಧ್ಯತೆ

ಪಿಟಿಐ
Published 20 ಸೆಪ್ಟೆಂಬರ್ 2021, 5:29 IST
Last Updated 20 ಸೆಪ್ಟೆಂಬರ್ 2021, 5:29 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ಚಂಡಿಗಡ: ಚರಣ್‌ಜಿತ್‌ಸಿಂಗ್‌ ಚನ್ನಿ ಅವರು ಪಂಜಾಬ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಚನ್ನಿ ಅವರು ಇಂದು ಬೆಳಿಗ್ಗೆ 11ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮೊದಲು ಅವರು ಚಮಕೌರ್‌ ಸಾಹಿಬ್‌ನಲ್ಲಿನ ಗುರುದ್ವಾರಕ್ಕೆ ತೆರಳಿ ಗೌರವ ಸಲ್ಲಿಸಿದರು.

ಕಾಂಗ್ರೆಸ್‌ ಪಕ್ಷವು ಇಬ್ಬರು ಹಿರಿಯ ನಾಯಕರಾದ ಬ್ರಹ್ಮ ಮೊಹಿಂದ್ರ ಮತ್ತುಸುಖ್ಜಿಂದರ್ ಸಿಂಗ್‌ ರಾಂಧ್ವಾ ಅವರನ್ನು ಉಪ ಮುಖ್ಯಮಂತ್ರಿಗಳಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.