ADVERTISEMENT

ರಾಹುಲ್ ಗಾಂಧಿ ಟ್ವಿಟರ್ ಖಾತೆ ತಾತ್ಕಾಲಿಕ ಸ್ಥಗಿತ

ಪಿಟಿಐ
Published 7 ಆಗಸ್ಟ್ 2021, 17:09 IST
Last Updated 7 ಆಗಸ್ಟ್ 2021, 17:09 IST
ರಾಹುಲ್ ಗಾಂಧಿ (ಪಿಟಿಐ ಚಿತ್ರ)
ರಾಹುಲ್ ಗಾಂಧಿ (ಪಿಟಿಐ ಚಿತ್ರ)   

ನವದೆಹಲಿ: ‘ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆ ಶನಿವಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ’ ಎಂದು ಕಾಂಗ್ರೆಸ್ ತಿಳಿಸಿದೆ.

ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ಥರ ಜತೆಗಿನ ಫೋಟೊದೊಂದಿಗೆ ರಾಹುಲ್‌ ಗಾಂಧಿ ಅವರು ಇತ್ತೀಚೆಗೆ ಮಾಡಿದ್ದ ಪೋಸ್ಟ್‌ ಅನ್ನು ಟ್ವಿಟರ್‌ ತನ್ನ ವೇದಿಕೆಯಿಂದಲೇ ತೆಗೆದು ಹಾಕಿತ್ತು. ಇದಾದ ಮರುದಿನವೇ ಖಾತೆಯನ್ನೇ ಸ್ಥಗಿತಗೊಳಿಸಿದೆ.

‘ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ ಮತ್ತು ಅದರ ಮರುಸ್ಥಾಪನೆಗಾಗಿ ಪ್ರಕ್ರಿಯೆಗಳನ್ನು ಅನುಸರಿಸಲಾಗುತ್ತಿದೆ. ಪುನಃಸ್ಥಾಪನೆಯಾಗುವ ವರೆಗೂ ಅವರು ಇತರ ಸಾಮಾಜಿಕ ಮಾಧ್ಯಮಗಳ ಮೂಲಕ ನಿಮ್ಮ ಜತೆ ಸಂಪರ್ಕದಲ್ಲಿರಲಿದ್ದಾರೆ. ಆ ಮೂಲಕ ನಮ್ಮ ಜನರಿಗಾಗಿ ಮತ್ತು ಅವರ ಹಕ್ಕುಗಳಿಗಾಗಿ ದನಿಯೆತ್ತುವುದನ್ನು ಮುಂದುವರಿಸಲಿದ್ದಾರೆ. ಜೈ ಹಿಂದ್’ ಎಂದು ಕಾಂಗ್ರೆಸ್‌ನ ಅಧಿಕೃತ ಟ್ವಿಟರ್‌ಹ್ಯಾಂಡಲ್‌ನಿಂದ ಟ್ವೀಟ್ ಮಾಡಲಾಗಿತ್ತು.

ಇದೀಗ ಮತ್ತೊಂದು ಟ್ವೀಟ್ ಮಾಡಿದ್ದು, ಖಾತೆಯು ತಾತ್ಕಾಲಿಕವಾಗಿ ‘ಲಾಕ್’ ಆಗಿದೆ ಎಂದು ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.