ADVERTISEMENT

ರಾಜಸ್ಥಾನದಲ್ಲಿ ರಸ್ತೆ ಅಪಘಾತ; 6 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2022, 0:59 IST
Last Updated 20 ಆಗಸ್ಟ್ 2022, 0:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜೈಪುರ: ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.

ಯಾತ್ರಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಟ್ರ್ಯಾಕ್ಟರ್ ಹಾಗೂ ಟ್ರಕ್ ಡಿಕ್ಕಿ ಹೊಡೆದಿದೆ ಎಂದು ಸುಮೇರ್‌ಪುರ ಪೊಲೀಸ್ ಠಾಣೆ ಅಧಿಕಾರಿ ರಾಮೇಶ್ವರ ಭಾಟಿ ತಿಳಿಸಿದ್ದಾರೆ.

ಯಾತ್ರಿಕರು ಜೈಸಲ್‌ಮೆರ್ ರಾಮದೇವ್ರಾ ಮಂದಿರದಿಂದ ಹಿಂದಿರುಗುತ್ತಿದ್ದರು.

ಈ ದುರ್ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯರು ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.