ADVERTISEMENT

ಶೇ.100ರಷ್ಟು ಚಿತ್ರಮಂದಿರ ಭರ್ತಿ ಆದೇಶ ಹಿಂಪಡೆಯಲು ತಮಿಳುನಾಡಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2021, 14:57 IST
Last Updated 6 ಜನವರಿ 2021, 14:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಚಿತ್ರಮಂದಿರಗಳಲ್ಲಿ ಶೇ. 100 ರಷ್ಟು ಆಸನ ಭರ್ತಿಗೆ ಇನ್ನೂ ಅನುಮತಿ ನೀಡಲಾಗಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರ ಗೃಹ ಸಚಿವಾಲಯವು, ಚಿತ್ರಮಂದಿರ ಭರ್ತಿ ಮಾಡಿ ಚಲನಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿದ್ದ ತಮಿಳುನಾಡು ಸರ್ಕಾರಕ್ಕೆ ಆದೇಶ ಹಿಂಪಡೆಯುವಂತೆ ಸೂಚಿಸಿದೆ.

ಹಂತ ಹಂತವಾಗಿ ಲಾಕ್ ಡೌನ್ ಆನ್ ಲಾಕ್ ಪ್ರಕ್ರಿಯೆಯ ಭಾಗವಾಗಿ ಇದುವರೆಗೆ ಶೇ. 50 ರಷ್ಟು ಆಸನಗಳ ಭರ್ತಿ ಮೂಲಕ ಚಲನಚಿತ್ರ ಪ್ರದರ್ಶನಕ್ಕೆ ಕೇಂದ್ರ ಗೃಹ ಇಲಾಖೆ ಅನುಮತಿ ನೀಡಿದೆ. ಈ ಕುರಿತ ಆ ಆದೇಶವನ್ನು ಪತ್ರದ ಮೂಲಕ ತಮಿಳುನಾಡು ರಾಜ್ಯ ಸರ್ಕಾರಕ್ಕೆ ಮತ್ತೆ ನೆನಪಿಸಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಈ ಮಾರ್ಗಸೂಚಿಗಳನ್ನು ಜನವರಿ 31 ರವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.

"ಅನ್ ಲಾಕ್ ಮಾರ್ಗಸೂಚಿಗಳನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ದುರ್ಬಲಗೊಳಿಸುವಂತಿಲ್ಲ ... ಯಾವುದೇ ರೀತಿಯಲ್ಲಿ ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು" ಎಂದು ಸಚಿವಾಲಯದ ಪತ್ರದಲ್ಲಿ ಸೂಚಿಸಲಾಗಿದೆ.

ADVERTISEMENT

ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಕೋವಿಡ್-ನಿಯಮಾವಳಿಗಳನ್ನು ಪಾಲಿಸಲು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.