ADVERTISEMENT

ಬಕ್ರೀದ್‌: ಕೋವಿಡ್‌ ನಿರ್ಬಂಧ ಸಡಿಲಿಸಿದ ಕೇರಳದ ನಿರ್ಧಾರ ಸರಿಯಲ್ಲ– ‘ಸುಪ್ರೀಂ’

ಪಿಟಿಐ
Published 20 ಜುಲೈ 2021, 8:58 IST
Last Updated 20 ಜುಲೈ 2021, 8:58 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ:ಕೇರಳದ ಕೆಲ ಪ್ರದೇಶಗಳಲ್ಲಿಕೋವಿಡ್‌ ದೃಢಪ್ರಮಾಣ ಈಗಲೂ ಹೆಚ್ಚಿದೆ. ಹೀಗಿದ್ದರೂ, ಬಕ್ರೀದ್‌ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಸಡಿಲಿಸಲು ಅನುಮತಿ ನೀಡಿರುವ ಆ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ ಎಂದು ಸುಪ್ರೀಂಕೋರ್ಟ್‌ ಮಂಗಳವಾರ ಹೇಳಿದೆ.

ನಿರ್ಬಂಧಗಳ ಸಡಿಲಿಕೆಯಿಂದಾಗಿ ಕೊರೊನಾ ಸೋಂಕು ಮತ್ತಷ್ಟು ವ್ಯಾಪಕವಾಗುವುದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಸುಪ್ರೀಂಕೋರ್ಟ್‌ ಎಚ್ಚರಿಸಿದೆ.

ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್‌.ಎಫ್‌.ನರೀಮನ್‌ ಹಾಗೂ ಬಿ.ಆರ್.ಗವಾಯಿ ಅವರಿರುವ ನ್ಯಾಯಪೀಠ, ‘ಕೇರಳ ಸರ್ಕಾರದ ರೀತಿಯಲ್ಲೇ ನಿರ್ಬಂಧಗಳ ಸಡಿಲಿಕೆಗೆ ಅನುಮತಿ ನೀಡುವ ಮೂಲಕ ದೇಶದ ಜನತೆಯನ್ನು ಕೋವಿಡ್‌ ಸಂಕಷ್ಟಕ್ಕೆ ದೂಡಿದಂತಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿತು.

ADVERTISEMENT

‘ಸಂವಿಧಾನದ 21ನೇ ವಿಧಿ ಎಲ್ಲರಿಗೂ ಬದುಕುವ ಹಕ್ಕನ್ನು ನೀಡಿದೆ. ಕೇರಳ ಸರ್ಕಾರ ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು’ ಎಂದೂ ನ್ಯಾಯಪೀಠ ನಿರ್ದೇಶನ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.