ADVERTISEMENT

12ನೇ ತರಗತಿ ಪರೀಕ್ಷೆ ಮುಂದೂಡಿದ ತಮಿಳುನಾಡು ಸರ್ಕಾರ

ಪಿಟಿಐ
Published 18 ಏಪ್ರಿಲ್ 2021, 14:40 IST
Last Updated 18 ಏಪ್ರಿಲ್ 2021, 14:40 IST
ಪರೀಕ್ಷೆ
ಪರೀಕ್ಷೆ   

ಚೆನ್ನೈ: ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ ರಾಜ್ಯದಲ್ಲಿ 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಮಿಳುನಾಡು ಸರ್ಕಾರ ಭಾನುವಾರ ಘೋಷಿಸಿದೆ.

ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದಲ್ಲಿ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಯಿತು.

ಅಲ್ಲದೇ, ಭಾನುವಾರ ಸಂಪೂರ್ಣ ಲಾಕ್‌ಡೌನ್, ಏ. 20ರಿಂದ ಜಾರಿಯಾಗುವಂತೆ ರಾತ್ರಿ 10ರಿಂದ ಬೆಳಿಗಿನ 4 ರ ವರೆಗೆ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದೂ ಸರ್ಕಾರ ಘೋಷಿಸಿದೆ.

ADVERTISEMENT

12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದರೂ, ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.