ADVERTISEMENT

ಅಸಂಘಟಿತ ಕಾರ್ಮಿಕರ ನೋಂದಣಿಗೆ ವೇಗ: ಇ-ಶ್ರಮ್‌ನಲ್ಲಿ 1 ಕೋಟಿಗೂ ಹೆಚ್ಚು ನೋಂದಣಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಸೆಪ್ಟೆಂಬರ್ 2021, 17:22 IST
Last Updated 19 ಸೆಪ್ಟೆಂಬರ್ 2021, 17:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಅಸಂಘಟಿತ ಕಾರ್ಮಿಕರ ನೋಂದಣಿ ವೇಗ ಪಡೆಯುತ್ತಿದ್ದು, 'ಇ-ಶ್ರಮ್' ಪೋರ್ಟಲ್‌ನಲ್ಲಿ 1 ಕೋಟಿಗೂ ಹೆಚ್ಚು ಮಂದಿ ನೋಂದಾಯಿಸಿಕೊಂಡಿದ್ದಾರೆ.

ಬಿಹಾರ, ಒಡಿಶಾ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಮುಂಚೂಣಿಯಲ್ಲಿವೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ನೋಂದಣಿಗಳನ್ನು ಸುಗಮಗೊಳಿಸುವಲ್ಲಿ 'ಸಾಮಾನ್ಯ ಸೇವಾ ಕೇಂದ್ರ'ಗಳು (ಸಿಎಸ್ಸಿ) ನಿರ್ಣಾಯಕ ಪಾತ್ರ ವಹಿಸುತ್ತಿದ್ದು, ಸಿಎಸ್ಸಿ ಮೂಲಕ ಸುಮಾರು 68 ಪ್ರತಿಶತ ನೋಂದಣಿ ಮಾಡಲಾಗಿದೆ.

ADVERTISEMENT

ಕಾರ್ಮಿಕ ಸಚಿವರು, ಸಹಾಯಕ ಸಚಿವರು ಮತ್ತು ಹಿರಿಯ ಅಧಿಕಾರಿಗಳು ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಅಸಂಘಟಿತ ಕಾರ್ಮಿಕರು ಮತ್ತು ಕಾರ್ಮಿಕ ಸಂಘಗಳ ಮುಖಂಡರು ಹಾಗೂ ಮಾಧ್ಯಮಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ. ಇ-ಶ್ರಮ್‌ ಪೋರ್ಟಲ್‌ನ ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳ ಬಗ್ಗೆ ಅವರಿಗೆ ಅರಿವು ಮೂಡಿಸುತ್ತಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.