ADVERTISEMENT

ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಲೇಖಕಿ ಕಮಲಾ ಭಾಸಿನ್ ನಿಧನ

ಪಿಟಿಐ
Published 25 ಸೆಪ್ಟೆಂಬರ್ 2021, 13:06 IST
Last Updated 25 ಸೆಪ್ಟೆಂಬರ್ 2021, 13:06 IST
ಕಮಲಾ ಭಾಸಿನ್ 
ಕಮಲಾ ಭಾಸಿನ್    

ನವದೆಹಲಿ: ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಲೇಖಕಿ ಹಾಗೂ ಕವಯಿತ್ರಿ ಕಮಲಾ ಭಾಸಿನ್(75) ಶನಿವಾರ ನಿಧನರಾಗಿದ್ದಾರೆ.

1946 ರಲ್ಲಿ ಪಂಜಾಬ್‌ನಲ್ಲಿ ಜನಿಸಿದ್ದ ಅವರು ನವದೆಹಲಿಯಲ್ಲಿ ವಾಸಿಸುತ್ತಿದ್ದರು. ಕ್ಯಾನ್ಸರ್ ಪೀಡಿತರಾಗಿದ್ದ ಕಮಲಾ ಭಾಸಿನ್ಶನಿವಾರ ಬೆಳಿಗ್ಗೆ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪಿಟಿಐ ವರದಿ ಮಾಡಿದೆ.

ಅವರ ನಿಧನಕ್ಕೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಡಿಸಿಎಂ ಮನಿಶ್ ಸಿಸೋಡಿಯಾ, ಸಂಸದ ಶಶಿ ತರೂರ್, ಸಾಮಾಜಿಕ ಕಾರ್ಯಕರ್ತ ಹರ್ಷ ಮಂದರ್ ಸೇರಿದಂತೆ ಅನೇಕರು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

ADVERTISEMENT

ಕಮಲಾ ಅವರು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಲೇಖನಗಳನ್ನು, ಕವನಗಳನ್ನು ಬರೆಯುವುದಲ್ಲದೇ ಪ್ರಧಾನವಾಗಿ ಮಹಿಳಾ ಹಕ್ಕುಗಳ ಪರ ಹೋರಾಟಗಳಲ್ಲಿ ಪಾಲ್ಗೊಳ್ಳುತ್ತಿದ್ದರು.

ಅವರು ಭಾರತ ಮತ್ತು ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಮಹಿಳಾ ಪರ ಗಟ್ಟಿ ಧನಿಯಾಗಿದ್ದರು ಎಂದು ಅನೇಕ ಲೇಖಕರು, ಸಾಹಿತಿಗಳು ಹಾಗೂ ಸಾಮಾಜಿಕ ಹೋರಾಟಗಾರರು ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.