ADVERTISEMENT

‘ಅಮೃತ’ ಗ್ರಾ.ಪಂ. ಯೋಜನೆಗೆ ಚಾಲನೆ ನಾಳೆ: ಸಚಿವ ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2021, 22:20 IST
Last Updated 21 ಸೆಪ್ಟೆಂಬರ್ 2021, 22:20 IST
ಕೆ.ಎಸ್‌.ಈಶ್ವರಪ್ಪ
ಕೆ.ಎಸ್‌.ಈಶ್ವರಪ್ಪ   

ಬೆಂಗಳೂರು: 'ಸ್ವಾತಂತ್ರ್ಯೋತ್ಸವದ 75ನೇ ವರ್ಷದ ನೆನಪಿಗಾಗಿ ‘ಅಮೃತ’ ಗ್ರಾಮ ಪಂಚಾಯತಿ ಯೋಜನೆಯಲ್ಲಿ 750 ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಗುರುವಾರ ಚಾಲನೆ ನೀಡಲಿದ್ದಾರೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ’ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಲಿದ್ದು, ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ. ಗ್ರಾಮ ಪಂಚಾಯತಿಯಲ್ಲಿ ಕುಡಿಯುವ ‌ನೀರು, ಸ್ವಚ್ಚತೆಗೆ ₹ 25 ಲಕ್ಷ ಹೆಚ್ಚುವರಿ ಅನುದಾನ ನೀಡಲಾಗುವುದು. ಮುಂದಿನ ಬಜೆಟ್ ಒಳಗೆ ಕಾಮಗಾರಿ ಮುಗಿಸಬೇಕಿದೆ‘ ಎಂದರು.

‘ಗ್ರಾಮ ಪಂಚಾಯತಿಯನ್ನು ಆಯ್ಕೆ ಮಾಡುವ ಹೊಣೆಯನ್ನು ಜಿಲ್ಲೆ ಉಸ್ತುವಾರಿ ಸಚಿವರಿಗೆ ನೀಡಲಾಗಿದೆ. ಈಗಾಗಲೇ ಬಹುತೇಕ ಸಚಿವರು ಗ್ರಾಮ ಪಂಚಾಯಿತಿಗಳ ಪಟ್ಟಿಯನ್ನು ನೀಡಿದ್ದಾರೆ’ ಎಂದರು.

ADVERTISEMENT

’ನರೇಗಾ ಯೋಜನೆಯಲ್ಲಿ ಪ್ರಸಕ್ತ ವರ್ಷದ 13 ಕೋಟಿ ಮಾನವ ದಿನಗಳ ಗುರಿ ಈಗಾಗಲೇ ಸಾಧಿಸಲಾಗಿದೆ. 20 ಕೋಟಿ‌ ಮಾನವ ದಿನ ಸೃಜಿಸಲು ಅವಕಾಶ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.