ADVERTISEMENT

ಸಿಎಂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಆನಂದ ಮಾಮನಿಗೆ‌ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 11:28 IST
Last Updated 16 ಏಪ್ರಿಲ್ 2021, 11:28 IST
   

ಬೆಳಗಾವಿ: ವಿಧಾನಸಭೆ ಉಪ ಸಭಾಧ್ಯಕ್ಷರೂ ಆಗಿರುವ ಸವದತ್ತಿ- ಯಲ್ಲಮ್ಮ ಕ್ಷೇತ್ರದ ಶಾಸಕ ಆನಂದ (ವಿಶ್ವನಾಥ) ಮಾಮನಿ ಅವರಿಗೆ ಶುಕ್ರವಾರ ಕೋವಿಡ್- 19 ದೃಢಪಟ್ಟಿದೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. ವೈದ್ಯರು 17 ದಿನ ಮನೆಯಲ್ಲಿ ಪ್ರತ್ಯೇಕವಾಗಿ ಇರುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಉಪ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.