ADVERTISEMENT

ಸ್ವಾತಂತ್ರ್ಯದ ಅಮೃತ ಮಹೋತ್ಸವ: ಸಮಿತಿ ಸಹ ಸಂಚಾಲಕರಾಗಿ ಬಿ.ಕೆ. ಹರಿಪ್ರಸಾದ್‌

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2021, 16:58 IST
Last Updated 24 ಸೆಪ್ಟೆಂಬರ್ 2021, 16:58 IST
ಬಿ.ಕೆ. ಹರಿಪ್ರಸಾದ್‌
ಬಿ.ಕೆ. ಹರಿಪ್ರಸಾದ್‌   

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಕಾಂಗ್ರೆಸ್‌ ಪಕ್ಷದಿಂದ ವರ್ಷವಿಡೀ ಆಚರಿಸಲು ಯೋಜನೆ ರೂಪಿಸಲು ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅಧ್ಯಕ್ಷತೆಯಲ್ಲಿ ಎಐಸಿಸಿ ರಚಿಸಿರುವ ಸಮಿತಿಯ ಸಹ ಸಂಚಾಲಕರನ್ನಾಗಿ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರನ್ನು ನೇಮಕ ಮಾಡಲಾಗಿದೆ.

ಹರಿಪ್ರಸಾದ್‌ ಅವರನ್ನು ಸಹ ಸಂಚಾಲಕರನ್ನಾಗಿ ನೇಮಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಮನಮೋಹನ್‌ ಸಿಂಗ್‌ ನೇತೃತ್ವದಲ್ಲಿ 11 ಸದಸ್ಯರ ಸಮಿತಿಯನ್ನು ಕೆಲವು ದಿನಗಳ ಹಿಂದೆ ನೇಮಕ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT