ADVERTISEMENT

ನ್ಯಾ.ಸದಾಶಿವ ವರದಿ ವಿರುದ್ಧ ಮನವಿ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2021, 19:05 IST
Last Updated 24 ಸೆಪ್ಟೆಂಬರ್ 2021, 19:05 IST
ಸಿದ್ದರಾಮಯ್ಯ ಅವರಿಗೆ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮನವಿ ಸಲ್ಲಿಸಿದರು. ಶಾಸಕ ಚಂದ್ರಪ್ಪ, ಸಂಸದ ಉಮೇಶ್ ಜಾಧವ್, ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ, ಅರವಿಂದ ಲಿಂಬಾವಳಿ, ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್, ಶಾಸಕರಾದ ವೆಂಕಟರಮಣಪ್ಪ, ಭೀಮಾ ನಾಯ್ಕ ಇದ್ದರು

ಬೆಂಗಳೂರು: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಏಕಪಕ್ಷೀಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡದಂತೆ ಒತ್ತಡ ಹೇರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ನೇತೃತ್ವದ ನಿಯೋಗ ಮನವಿ ಸಲ್ಲಿಸಿತು.

‘ಕರ್ನಾಟಕ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿರುವ ಯಾವುದೇ ಜಾತಿಯನ್ನು ಪಟ್ಟಿಯಿಂದ ಕೈ ಬಿಡುವ ಪ್ರಸ್ತಾವನೆ ಇಲ್ಲ ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ರಾಜ್ಯ ಸರ್ಕಾರ ತಿಳಿಸಬೇಕು. ಈ ಎರಡೂ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು’ ಎಂದು ಸಿದ್ದರಾಮಯ್ಯ ಅವರಿಗೆ ನಿಯೋಗ ಮನವಿ ಮಾಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT