ADVERTISEMENT

ಎನ್‌ಇಪಿ ಕುತಂತ್ರದ ನೀತಿ: ಬಿ.ಕೆ. ಹರಿಪ್ರಸಾದ್ ಟೀಕೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 14:10 IST
Last Updated 20 ಸೆಪ್ಟೆಂಬರ್ 2021, 14:10 IST
ಬಿ.ಕೆ. ಹರಿಪ್ರಸಾದ್
ಬಿ.ಕೆ. ಹರಿಪ್ರಸಾದ್   

ಬೆಳಗಾವಿ: ‘ಕೇಂದ್ರ ಸರ್ಕಾರವು ಚರ್ಚೆಯನ್ನೂ ಮಾಡದೆ ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಅನುಷ್ಠಾನಗೊಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯು (ಎನ್‌ಇಪಿ) ಕುತಂತ್ರ ನೀತಿಯಾಗಿದೆ' ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಟೀಕಿಸಿದರು.

ನಗರದಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಎನ್‌ಇಪಿಯು ಬೇರೆ ರಾಜ್ಯಗಳಲ್ಲಿ ಅನುಷ್ಠಾನವಾಗಿಲ್ಲ. ಆದರೆ, ನಮ್ಮ ರಾಜ್ಯದಲ್ಲಿ ಮಾತ್ರ ತರಾತುರಿಯಲ್ಲಿ ಜಾರಿಗೊಳಿಸಲಾಗಿದೆ. ನೀತಿಯಲ್ಲಿ ಸಂಘ ಪರಿವಾರದ ರಹಸ್ಯ ಕಾರ್ಯಸೂಚಿಯನ್ನು ಅನುಷ್ಠಾನಕ್ಕೆ ತರುವ ಷಡ್ಯಂತ್ರ ನಡೆಯುತ್ತಿದೆ. ಅದರ ವಿರುದ್ಧ ಧ್ವನಿ ಎತ್ತುವ ಕೆಲಸವನ್ನು ಪಕ್ಷದಿಂದ ಮಾಡಲಾಗುತ್ತಿದೆ’ ಎಂದರು.

ಪಕ್ಷದ ಜಿಲ್ಲಾ ಗ್ರಾಮೀಣ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ., ಮುಖಂಡ ರಾಜೇಂದ್ರ ಪಾಟೀಲ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.