ADVERTISEMENT

ಮುಖ್ಯಮಂತ್ರಿ ಯಡಿಯೂರಪ್ಪಗೆ ವಯಸ್ಸಾಗಿದ್ದು, ಪ್ರಭಾವ ಮಬ್ಬಾಗಿದೆ: ಎಚ್.ವಿಶ್ವನಾಥ್

ಜೆಡಿಎಸ್‌ ಕುಟುಂಬ ‘ರಾಕ್ಷಸ ರಾಜಕಾರಣ’ ಇಲ್ಲೂ ಇದೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2021, 9:08 IST
Last Updated 17 ಜೂನ್ 2021, 9:08 IST
ಎಚ್‌.ವಿಶ್ವನಾಥ್‌
ಎಚ್‌.ವಿಶ್ವನಾಥ್‌   

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಕುರಿತು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್ ಆಡಿರುವ ಮಾತುಗಳು ಯಡಿಯೂರಪ್ಪ ಬಣದ ಶಾಸಕರನ್ನು ಕೆರಳಿಸಿದ್ದು, ತೀವ್ರ ವಾಗ್ದಾಳಿ ನಡೆಸಿದ್ದಾರೆ.

‘ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಹಿಂದಿನ ವೇಗ ಇಲ್ಲ. ಅವರಿಗೆ ವಯಸ್ಸಾಗಿದ್ದು ಪ್ರಭಾವ ಮಬ್ಬಾಗಿದೆ. ವರಿಷ್ಠರು ಹೇಳಿದರೆ ರಾಜೀನಾಮೆಗೆ ಸಿದ್ಧರಿರುವ ಅವರು ಕೇವಲ ಮಾರ್ಗದರ್ಶಕರಾಗಿ ಮುಂದುವರಿಯಬೇಕು’ ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್ ಹೇಳಿದರು.

ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ಸಿಂಗ್ ಭೇಟಿಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ವಿಶ್ವನಾಥ್‌, ಜೆಡಿಎಸ್‌ನಲ್ಲಿರುವ ಕುಟುಂಬ ರಾಜಕಾರಣ, ರಾಕ್ಷಸ ರಾಜಕಾರಣ. ಅದು ಬಿಜೆಪಿಯಲ್ಲೂ ಇದೆ. ಯಡಿಯೂರಪ್ಪ ಅವರ ಬಗ್ಗೆ ಗೌರವ ಹೊಂದಿದ್ದೇನೆ. ಆದರೆ ಸರ್ಕಾರ ಯಾವ ದಿಕ್ಕಿನಲ್ಲಿ ಸಾಗುತ್ತಿದೆ, ಕುಟುಂಬದ ಹಸ್ತಕ್ಷೇಪ, ಭ್ರಷ್ಟಾಚಾರ ಹೆಚ್ಚಾಗಿದೆ ಎಂಬುದರ ವಿಚಾರವನ್ನು ಅವರಿಗೆ ತಿಳಿಸಿದ್ದೇನೆ ಎಂದರು.

ADVERTISEMENT

ನಾನು ಯಾರ ಪರ ಅಥವಾ ವಿರುದ್ಧವೂ ಇಲ್ಲ. ನನಗೆ ಅನ್ನಿಸಿದ್ದನ್ನು ಅವರಿಗೆ ಹೇಳಿದ್ದೇನೆ. ಯಡಿಯೂರಪ್ಪ ಸ್ಥಾನಕ್ಕೆ ಪಂಚಮಸಾಲಿ ಸಮುದಾಯದ ಒಬ್ಬರನ್ನು ನೇಮಿಸಿ, ಎಲ್ಲರೂ ಒಟ್ಟಿಗೆ ಕೆಲಸ ಮಾಡಿದರೆ ಪಕ್ಷಕ್ಕೆ ಭವಿಷ್ಯವಿದೆ ಎಂಬ ವಿಚಾರವನ್ನು ಅವರಿಗೆ ಹೇಳಿದೆ. ನನ್ನ ಮಾತುಗಳನ್ನು ಗಂಭೀರವಾಗಿ ಆಲಿಸಿದ್ದಾರೆ. ಹೈಕಮಾಂಡ್‌ ಏನು ಕ್ರಮ ತೆಗೆದುಕೊಳ್ಳುತ್ತದೆಯೋ ಕಾದು ನೋಡಬೇಕು ಎಂದು ವಿಶ್ವನಾಥ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.