ADVERTISEMENT

ಲಸಿಕೆ ರಫ್ತು ಮೂಲಕ ದೇಶದ ಜನರನ್ನು ಕಡೆಗಣಿಸುತ್ತಿರುವ ಬಿಜೆಪಿ ಸರ್ಕಾರ: ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಸೆಪ್ಟೆಂಬರ್ 2021, 10:09 IST
Last Updated 21 ಸೆಪ್ಟೆಂಬರ್ 2021, 10:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೇಂದ್ರ ಸರ್ಕಾರವು ಮುಂದಿನ ತಿಂಗಳಿನಿಂದ ಹೆಚ್ಚುವರಿ ಕೋವಿಡ್ ಲಸಿಕೆಗಳ ರಫ್ತು ಪುನರಾರಂಭಿಸುವ ನಿರ್ಧಾರ ಕೈಗೊಂಡಿರುವುದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

‘ಕೋವಿಡ್ ಲಸಿಕೆ ರಫ್ತು ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ದೇಶವಾಸಿಗಳಿಗೆ ಸಾವಿನ ಭಾಗ್ಯ ನೀಡಿದ್ದರು. ದೇಶದಲ್ಲಿ ಇದುವರೆಗೆ ಕೇವಲ ಶೇ 14ರಷ್ಟು ಜನರು 2ನೇ ಡೋಸ್ ಲಸಿಕೆ ಪಡೆದಿದ್ದಾರೆ. ಕೇವಲ 20 ಕೋಟಿ ಜನರು ಮೊದಲ ಡೋಸ್ ಪಡೆದಿದ್ದಾರೆ. 3ನೇ ಅಲೆಯ ಭೀತಿ ಕಾಡುತ್ತಿದೆ. ಹೀಗಿರುವಾಗ ಮತ್ತೊಮ್ಮೆ ಲಸಿಕೆ ಉದ್ಯಮಕ್ಕೆ ಮುಂದಾಗಿ ದೇಶವಾಸಿಗಳನ್ನು ಕಡೆಗಣಿಸುತ್ತಿದೆ ಬಿಜೆಪಿ ಸರ್ಕಾರ’ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

'ಲಸಿಕೆ ಮೈತ್ರಿ' ಕಾರ್ಯಕ್ರಮದ ಅಡಿಯಲ್ಲಿ ಭಾರತವು ಮುಂದಿನ ತಿಂಗಳು ಹೆಚ್ಚುವರಿ ಕೋವಿಡ್ ಲಸಿಕೆಗಳ ರಫ್ತನ್ನು ಪುನರಾರಂಭಿಸಲಿದೆ. ಜಾಗತಿಕ ಲಸಿಕೆ ಹಂಚಿಕೆ ಕಾರ್ಯಕ್ರಮ ‘ಕೋವ್ಯಾಕ್ಸ್‌’ಗೆ ಭಾರತ ಬದ್ಧತೆ ಪ್ರದರ್ಶಿಸುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಸೋಮವಾರ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.