ADVERTISEMENT

ಹುಬ್ಬಳ್ಳಿ: ರಾಜ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 20:50 IST
Last Updated 2 ಆಗಸ್ಟ್ 2022, 20:50 IST
   

ಹುಬ್ಬಳ್ಳಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಮಂಗಳವಾರ ರಾತ್ರಿ 8.45ಕ್ಕೆ ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಇತರ ನಾಯಕರು ಅವರ ಜತೆ ದೆಹಲಿಯಿಂದ ಬಂದರು. ಬಿ.ಕೆ. ಹರಿಪ್ರಸಾದ, ಯು.ಟಿ. ಖಾದರ್, ಸಲೀಂ ಅಹ್ಮದ್, ಜಮೀರ್ ಅಹ್ಮದ್ ಖಾನ್, ಪಿ.ವಿ. ಮೋಹನ್ ಸೇರಿದಂತೆ ಇತರ ನಾಯಕರು ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದರು.

ರಾಹುಲ್‌ಗಾಂಧಿ ಅವರು ಗೋಕುಲ ರಸ್ತೆಯಲ್ಲಿ ಸೇರಿ‌ದ್ದ ಅಪಾರ ಸಂಖ್ಯೆಯ ಕಾರ್ಯಕರ್ತರತ್ತ ಕೈಬೀಸಿದರು. ಅಲ್ಲಿಂದ ನೇರವಾಗಿ ನಗರದ ಫಾರ್ಚೂನ್ ಪಾರ್ಕ್ ಹೋಟೆಲ್‌ನಲ್ಲಿ ಆಯೋಜಿಸಿರುವ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸಭೆಗೆ ತೆರಳಿದರು. ಮಲ್ಲಿಕಾರ್ಜುನ‌ ಖರ್ಗೆ, ಕೆ.ಎಚ್‌. ಮುನಿಯಪ್ಪ ಹೊರತುಪಡಿಸಿ ಎಲ್ಲ ಸದಸ್ಯರು ಸಭೆಗೆ ಹಾಜರಾಗಿದ್ದಾರೆ.

ADVERTISEMENT

ಸಭೆಯಲ್ಲಿ ಭಾಗಿ...
ಹುಬ್ಬಳ್ಳಿಯಗೋಕುಲ ರಸ್ತೆಯ ಫಾರ್ಚೂನ್ ಹೋಟೆಲ್‌ ಸಭಾಭವನದಲ್ಲಿ ಮಂಗಳವಾರ ರಾತ್ರಿ ನಡೆದ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮತ್ತಿತರ ಮುಖಂಡರು, ಹಾಲಿ ಮತ್ತು ಮಾಜಿ ಶಾಸಕರು, ಎಂಎಲ್‌ಸಿಗಳು ಪಾಲ್ಗೊಂಡಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.