ADVERTISEMENT

ಲಸಿಕಾ ಮೇಳ: 10.06 ಲಕ್ಷ ಡೋಸ್ ವಿತರಣೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 20:11 IST
Last Updated 22 ಸೆಪ್ಟೆಂಬರ್ 2021, 20:11 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕೋವಿಡ್ ಲಸಿಕೆ ನೀಡಿಕೆಯ ಬೃಹತ್‌ ಮೇಳದಲ್ಲಿ 10.06 ಲಕ್ಷ ಡೋಸ್‌ಗಳಷ್ಟು ಲಸಿಕೆಯನ್ನು ವಿತರಿಸಲಾಗಿದೆ.

ಒಂದು ತಿಂಗಳಿನಿಂದ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ವೇಗ ನೀಡಲಾಗಿದೆ. ಸೆ.1ರಿಂದ ಸೆ.21ರ ಅವಧಿಯಲ್ಲಿ ಒಂದು ಕೋಟಿ ಡೋಸ್‌ಗಳನ್ನು 18 ವರ್ಷ ಮೇಲ್ಪಟ್ಟವರಿಗೆ ಹಾಕಲಾಗಿದೆ.

ಬುಧವಾರ 8,540ಸರ್ಕಾರಿ ಕೇಂದ್ರಗಳು ಹಾಗೂ 384 ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ವಿತರಿಸಲಾಗಿದೆ.ಈವರೆಗೆ ನೀಡಲಾದ ಲಸಿಕೆಯ ಒಟ್ಟು ಡೋಸ್‌ಗಳ ಸಂಖ್ಯೆ 5.36 ಕೋಟಿ ದಾಟಿದೆ.3.81 ಕೋಟಿ ಮಂದಿ ಮೊದಲ ಡೋಸ್ ಹಾಗೂ 1.55 ಕೋಟಿ ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

ADVERTISEMENT

18ರಿಂದ 44 ವರ್ಷದವರಲ್ಲಿ 2.07 ಕೋಟಿ ಮಂದಿ ಮೊದಲ ಡೋಸ್ ಹಾಗೂ 51.54 ಲಕ್ಷ ಮಂದಿ ಎರಡನೇ ಡೋಸ್ಲಸಿಕೆಪಡೆದುಕೊಂಡಿದ್ದಾರೆ. 45 ವರ್ಷ ಮೇಲ್ಪಟ್ಟವರಲ್ಲಿ 1.56 ಕೋಟಿ ಮಂದಿ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ. ಅವರಲ್ಲಿ 89.44 ಲಕ್ಷ ಮಂದಿ ಎರಡೂ ಡೋಸ್ ಪೂರ್ಣಗೊಳಿಸಿದ್ದಾರೆ.

ಆರೋಗ್ಯ ಕಾರ್ಯಕರ್ತರಲ್ಲಿ 7.63 ಲಕ್ಷ ಹಾಗೂ ಕೋವಿಡ್ ಮುಂಚೂಣಿ ಯೋಧರಲ್ಲಿ 9.39 ಲಕ್ಷ ಮಂದಿ ಮೊದಲ ಡೋಸ್ ಪಡೆದಿದ್ದಾರೆ. ಇವರಲ್ಲಿ ಕ್ರಮವಾಗಿ 6.41 ಲಕ್ಷ ಮಂದಿ ಹಾಗೂ 6.73 ಲಕ್ಷ ಮಂದಿ ಎರಡನೇ ಡೋಸ್ ಲಸಿಕೆ ಹಾಕಿಸಿಕೊಂಡಿದ್ದಾರೆ.

ಈ ವರ್ಷದ ಅಂತ್ಯದೊಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೆ ಎರಡೂ ಡೋಸ್ ಲಸಿಕೆ ವಿತರಿಸುವ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.