ADVERTISEMENT

Covid-19 Karnataka Update: ಹೊಸ ಪ್ರಕರಣಗಳಲ್ಲಿ ಇಳಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಅಕ್ಟೋಬರ್ 2021, 14:15 IST
Last Updated 4 ಅಕ್ಟೋಬರ್ 2021, 14:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಇಳಿಕೆಯಾಗಿದೆ. ರಾಜ್ಯದಾದ್ಯಂತ ಸೋಮವಾರ 397 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 13 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಈವರೆಗೆ 29,78,286 ಮಂದಿ ಸೋಂಕಿತರಾಗಿದ್ದು, 37,832 ಮಂದಿ ಸೋಂಕಿತರು ಅಸುನೀಗಿದ್ದಾರೆ. 29,28,433 ಸೋಂಕಿತರು ಚೇತರಿಸಿಕೊಂಡಿರುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಂಕಿಅಂಶಗಳಿಂದ ತಿಳಿದುಬಂದಿದೆ.

ಸದ್ಯ 11,992 ಸಕ್ರಿಯ ಪ್ರಕರಣಗಳಿವೆ. ದೈನಂದಿನ ಕೋವಿಡ್ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 0.50ರಷ್ಟಿದ್ದು, ಸಾವಿನ ಪ್ರಮಾಣ ಶೇಕಡಾ 3.27ರಷ್ಟಿದೆ.

ADVERTISEMENT

ಬೆಂಗಳೂರು ನಗರದಲ್ಲಿ ಹೆಚ್ಚು, ಅಂದರೆ 166 ಪ್ರಕರಣಗಳು ವರದಿಯಾಗಿದ್ದು, 5 ಮಂದಿ ಸೋಂಕಿತರು ಅಸುನೀಗಿದ್ದಾರೆ. ಉಳಿದಂತೆ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲಿ 45, ಕೊಡಗಿನಲ್ಲಿ 25, ಮೈಸೂರಿನಲ್ಲಿ 40 ಪ್ರಕರಣಗಳು ವರದಿಯಾಗಿವೆ. ಹಾಸನದಲ್ಲಿ 33 ಪ್ರಕರಣಗಳು ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.