ADVERTISEMENT

Covid-19 Karnataka Update: ರಾಜ್ಯದಲ್ಲಿ 1,108 ಹೊಸ ಪ್ರಕರಣಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಸೆಪ್ಟೆಂಬರ್ 2021, 14:46 IST
Last Updated 16 ಸೆಪ್ಟೆಂಬರ್ 2021, 14:46 IST
ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಆರೋಗ್ಯ ಕಾರ್ಯಕರ್ತರು ಕೋವಿಡ್‌ ಪರೀಕ್ಷೆಗಾಗಿ ಪ್ರಯಾಣಿಕರೊಬ್ಬರ ಮೂಗಿನ ದ್ರವದ ಮಾದರಿ ಸಂಗ್ರಹಿಸುತ್ತಿರುವುದು–ಸಂಗ್ರಹ ಚಿತ್ರ
ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಆರೋಗ್ಯ ಕಾರ್ಯಕರ್ತರು ಕೋವಿಡ್‌ ಪರೀಕ್ಷೆಗಾಗಿ ಪ್ರಯಾಣಿಕರೊಬ್ಬರ ಮೂಗಿನ ದ್ರವದ ಮಾದರಿ ಸಂಗ್ರಹಿಸುತ್ತಿರುವುದು–ಸಂಗ್ರಹ ಚಿತ್ರ   

ಬೆಂಗಳೂರು: ಕರ್ನಾಟಕದಾದ್ಯಂತ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 1,108 ಹೊಸ ಪ್ರಕರಣಗಳು ದಾಖಲಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಪ್ರಕಟಿಸಿದೆ.

ಇದೇ ಅವಧಿಯಲ್ಲಿ ಸೋಂಕಿನಿಂದ 18 ಮಂದಿ ಸಾವಿಗೀಡಾಗಿದ್ದು, 809 ಜನ ಗುಣಮುಖರಾಗಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಒಟ್ಟು 16,174 ಪ್ರಕರಣಗಳು ಸಕ್ರಿಯವಾಗಿವೆ.

ಒಟ್ಟು ಪ್ರಕರಣಗಳ ಸಂಖ್ಯೆ 29,65,191ಕ್ಕೆ ಏರಿಕೆಯಾಗಿದ್ದು, ಈ ಪೈಕಿ 29,11,434 ಮಂದಿ ಗುಣಮುಖರಾಗಿದ್ದಾರೆ ಹಾಗೂ ಈವರೆಗೂ 37,555 ಮಂದಿ ಸಾವಿಗೀಡಾಗಿದ್ದಾರೆ. ಕೋವಿಡ್‌ ದೃಢ ಪ್ರಮಾಣ ಶೇ 0.66 ಹಾಗೂ ಕೋವಿಡ್‌ನಿಂದ ಮೃತಪಟ್ಟವರ ಪ್ರಮಾಣ ಶೇ 1.62ರಷ್ಟಿದೆ.

ADVERTISEMENT

ಬೆಂಗಳೂರಿನಲ್ಲಿ ಅತಿ ಹೆಚ್ಚು 308 ಹೊಸ ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 186, ಉಡುಪಿಯಲ್ಲಿ 113, ಮೈಸೂರಿನಲ್ಲಿ 87, ಹಾಸನದಲ್ಲಿ 64 ಹಾಗೂ ಚಿಕ್ಕಮಗಳೂರಿನಲ್ಲಿ 63 ಹೊಸ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.