ಬೆಂಗಳೂರು: ರಾಜ್ಯದಲ್ಲಿ ಗುರುವಾರ 442 ಹೊಸ ಪ್ರಕರಣಗಳು ದೃಢಪಟ್ಟಿದ್ದು, 7 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,79,773 ಕ್ಕೆ ಏರಿಕೆಯಾಗಿದೆ. ಆ ಪೈಕಿ 37,861 ಮಂದಿ ಸಾವಿಗೀಡಾಗಿದ್ದಾರೆ.
ಇದುವರೆಗೆ 29,30,264 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 11,619 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.36 ರಷ್ಟಿದ್ದು, ಮರಣ ಪ್ರಮಾಣ ಶೇ 1.58 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.