ADVERTISEMENT

ರಾಜ್ಯದಲ್ಲೂ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ರದ್ದು ಮಾಡಿ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 2 ಜೂನ್ 2021, 8:11 IST
Last Updated 2 ಜೂನ್ 2021, 8:11 IST
ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್   

ಬೆಂಗಳೂರು: ‘ಕೇಂದ್ರ ಸರ್ಕಾರ ನಿರ್ಧರಿಸಿದಂತೆಯೇ ರಾಜ್ಯ ಸರ್ಕಾರ ಕೂಡಾ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಾರ್ಷಿಷಕ ಪರೀಕ್ಷೆಗಳನ್ನು ರದ್ದು ಮಾಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್​​ ಅವರಿಗೆ ಟ್ವೀಟ್‌ ಮಾಡಿರುವ ಅವರು, ‘ಕೆಲವೊಮ್ಮೆ ಅನಿವಾರ್ಯ ಸಂದರ್ಭಗಳಲ್ಲಿ‌ ವಿನಾಯಿತಿ ನೀಡಲೇಬೇಕಾಗುತ್ತದೆ’ ಎಂದಿದ್ದಾರೆ.

‘12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿರುವ‌ ಕೇಂದ್ರ ಸರ್ಕಾರದ‌ ನಿರ್ಧಾರವನ್ನು ನಾನು‌ ಸ್ವಾಗತಿಸುತ್ತೇನೆ‘ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.