ADVERTISEMENT

ಧರ್ಮಸ್ಥಳ, ಕುಕ್ಕೆ: ದೇವರ ದರ್ಶನ, ಸೇವೆಗಳಿಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2021, 17:08 IST
Last Updated 18 ಸೆಪ್ಟೆಂಬರ್ 2021, 17:08 IST
ಧರ್ಮಸ್ಥಳ
ಧರ್ಮಸ್ಥಳ    

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಇಳಿಕೆಯಾಗಿರುತ್ತಿರುವ ಕಾರಣ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ದೇವರ ದರ್ಶನ ಹಾಗೂ ಸೇವೆಗಳಿಗೆ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.

ವಾರಾಂತ್ಯದ ನಿರ್ಬಂಧಗಳನ್ನು ರದ್ದುಗೊಳಿಸಲಾಗಿದೆ. ಆದರೆ, ದೇಗುಲಗಳಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಶನಿವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT