ADVERTISEMENT

ವಿರೋಧ ಪಕ್ಷಗಳನ್ನು ಹಗುರವಾಗಿ ಪರಿಗಣಿಸಬೇಡಿ: ಬಿ.ಎಸ್. ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2021, 7:52 IST
Last Updated 19 ಸೆಪ್ಟೆಂಬರ್ 2021, 7:52 IST
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   

ದಾವಣಗೆರೆ: ಯಾವುದೇ ಕಾರಣಕ್ಕೂ ವಿರೋಧ ಪಕ್ಷಗಳನ್ನು ಹಗುರವಾಗಿ ಪರಿಗಣಿಸಬಾರದು. ಬರುವ ವರ್ಷ ಚುನಾವಣೆಯ ವರ್ಷವಾಗಿದೆ ಅದಕ್ಕಾಗಿ ಭ್ರಮೆಯಲ್ಲಿರುವುದನ್ನು ಬಿಟ್ಟು ಪಕ್ಷ ಪ್ರಬಲಗೊಳಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆಯ ತ್ರಿಶೂಲ್ ಕಲಾಭವನದಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಚಿವರನ್ನು ಕಾಂಗ್ರೆಸ್ ನವರು ಸಂಪರ್ಕಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಕಿವಿ ಮಾತು ಹೇಳಿದರು.

ಮುಂದಿನ ದಿನಗಳಲ್ಲಿ ಚುನಾವಣೆಯ ವರ್ಷವಾಗಿದೆ ಅದಕ್ಕಾಗಿ ಕಾರ್ಯಕರ್ತರು ಹಾಗೂ ಮುಖಂಡರು ಇಂದಿನಿಂದಲೇ ಕಾರ್ಯಪ್ರವೃತ್ತರಾಗಬೇಕು. ಲೋಕಸಭಾ ಚುನಾವಣೆ ಪ್ರಧಾನಿ ಮೋದಿಯವರ ಅಲೆಯಲ್ಲಿ ಗೆಲುವು ಸಾಧಿಸಬಹುದು ಆದರೆ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವುದು ಸವಾಲಿನದಾಗಿದೆ. ಗೆಲ್ಲುತ್ತೇವೆ ಎಂಬ ಭ್ರಮೆ ಬೇಡ ಎಂದು ಎಚ್ಚರಿಸಿದ ಬಿಎಸ್‌ವೈ ಅಭಿವೃದ್ಧಿ ಕಾರ್ಯಗಳ ಮೂಲ ಪ್ರತಿ ಮನೆಮನೆಗೂ ರಾಜ್ಯ ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಬೇಕು ಹಾಗೂ ಮುಂದಿನ ತಿಂಗಳಿನಿಂದ ನಿರಂತರವಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷವನ್ನು ಸಂಘಟನೆ ಮಾಡಲಾಗುವುದು ಕಾರ್ಯಕರ್ತರು ಮುಖಂಡರು ಆತ್ಮವಿಶ್ವಾಸದಿಂದ ಇರಬೇಕು. ಮತ್ತೊಮ್ಮೆ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ನಡೆಯಲಿದೆ. ಮತ್ತೊಮ್ಮೆ 140 ಸ್ಥಾನಗಳಲ್ಲಿಬಿಜೆಪಿ ಗೆಲುವು ಪಡೆಯಲಿದೆ. ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದೇವೆ. ಪ.ಜಾತಿ, ಪ.ಪಂಗಡ, ಯುವಮೋರ್ಚಾ ಹಾಗೂ ಮಹಿಳಾ ಸಂಘಟನೆಗಳನ್ನು ರೂಪಿಸಿ ಪಕ್ಷದ ಗೆಲುವಿಗೆ ಸಹಕರಿಸಬೇಕು ಎಂದರು.

ADVERTISEMENT

ಬಿಎಸ್‌ವೈ ಪ್ರವಾಸದ ಬಗ್ಗೆ ಚರ್ಚೆ ನಡೆಯುತ್ತಿದೆ ನಾನು ಒಬ್ಬನೇ ಪ್ರವಾಸ ಮಾಡುತ್ತಿಲ್ಲ. ನಾನು ಹೋದಲ್ಲಿ ಸಂಸದರು, ಶಾಸಕರು ಎಲ್ಲರೂ ಬರುತ್ತಾರೆ. ಈ ರೀತಿ ಪಕ್ಷ ಸಂಘಟಿಸುವ ಮೂಲಕ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.