ADVERTISEMENT

1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ | ವೇಳಾಪಟ್ಟಿ ಪ್ರಕಟ; ಮಾ.12ರಿಂದ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2022, 11:47 IST
Last Updated 16 ಫೆಬ್ರುವರಿ 2022, 11:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಮಾರ್ಚ್ 12ರಿಂದ 16ರವರೆಗೆ ಆಯ್ಕೆ ಪರೀಕ್ಷೆ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ಫೆ. 28ರಿಂದಪ್ರವೇಶಪತ್ರ ಜಾಲತಾಣದಿಂದ (http://kea.kar.nic.on) ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.

ಪರೀಕ್ಷಾ ವೇಳಾಪಟ್ಟಿ:
ಮಾರ್ಚ್ 12ರಂದು ಮಧ್ಯಾಹ್ನ 2.30ರಿಂದ 4.30ರವರೆಗೆ ಸಾಮಾನ್ಯ ಜ್ಞಾನ ಕಡ್ಡಾಯ ಪತ್ರಿಕೆ (50 ಅಂಕ),
13ರಂದು ಬೆಳಿಗ್ಗೆ 10.30ರಿಂದ 12.30ರವರೆಗೆ ಕಡ್ಡಾಯ ಕನ್ನಡ (100 ಅಂಕ), ಮಧ್ಯಾಹ್ನ 2.30ರಿಂದ 4.30ರವರೆಗೆ ಕಡ್ಡಾಯ ಇಂಗ್ಲಿಷ್ (100 ಅಂಕ) ಪರೀಕ್ಷೆ ನಡೆಯಲಿದೆ. ಉಳಿದಂತೆ, ಐಚ್ಛಿಕ ವಿಷಯಗಳಲ್ಲಿ ತಲಾ 250 ಅಂಕಗಳ ಪರೀಕ್ಷೆ ನಡೆಯಲಿವೆ.

ADVERTISEMENT

ಅದರಂತೆ, ಮಾರ್ಚ್ 14ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಕನ್ನಡ, ಉರ್ದು, ಸಸ್ಯವಿಜ್ಞಾನ, ಭೂಗೋಳವಿಜ್ಞಾನ ಮತ್ತು ಫ್ಯಾಷನ್ ಟೆಕ್ನಾಲಜಿ, ಮಧ್ಯಾಹ್ನ 2ರಿಂದ 5ರವರೆಗೆ ರಾಜ್ಯಶಾಸ್ತ್ರ, ಮೈಕ್ರೋಬಯಾಲಜಿ ಮತ್ತು ಭೂಗರ್ಭ ವಿಜ್ಞಾನಪರೀಕ್ಷೆ ನಡೆಯಲಿವೆ.

15ರಂದು ಬೆಳಿಗ್ಗೆ ಇತಿಹಾಸ, ವಾಣಿಜ್ಯ, ಗಣಿತ ಮತ್ತು ಪ್ರಾಣಿಶಾಸ್ತ್ರ, ಮಧ್ಯಾಹ್ನ ಅರ್ಥಶಾಸ್ತ್ರ, ಭೌತವಿಜ್ಞಾನ, ರಸಾಯನ ವಿಜ್ಞಾನ, ಇಂಗ್ಲಿಷ್ ಮತ್ತು ಸಮಾಜಕಾರ್ಯಪರೀಕ್ಷೆ ನಡೆಯಲಿವೆ.

16ರಂದು ಬೆಳಿಗ್ಗೆ ಶಿಕ್ಷಣರ, ಹಿಂದಿ, ಕಂಪ್ಯೂಟರ್ ಸೈನ್ಸ್, ಕಾನೂನು ಮತ್ತು ಸಾಂಖ್ಯಿಕ, ಮಧ್ಯಾಹ್ನ ನಿರ್ವಹಣೆ, ಬಯೋಕೆಮಿಸ್ಟ್ರಿ, ಎಲೆಕ್ಟ್ರಾನಿಕ್ಸ್ ಮತ್ತು ಸಮಾಜಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

ವೆಬ್‌ಸೈಟ್‌:http://kea.kar.nic.on

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.