ADVERTISEMENT

ಪಿಯು ಪರೀಕ್ಷೆ: ಉಚಿತ ಪ್ರಯಾಣಕ್ಕೆ ಅವಕಾಶ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2021, 3:12 IST
Last Updated 19 ಆಗಸ್ಟ್ 2021, 3:12 IST

ಬೆಂಗಳೂರು: ಆ.19ರಿಂದ ಆರಂಭವಾಗಲಿರುವ 2020–21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣ ಮಾಡಲು ಕೆಎಸ್ಆರ್‌ಟಿಸಿ ಅವಕಾಶ ಕಲ್ಪಿಸಿದೆ.

ವ್ಯಾಸಂಗ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಪರೀಕ್ಷಾ ಕೇಂದ್ರ ಇಲ್ಲದಿದ್ದರೆ ನಿರ್ವಾಹಕರಿಗೆ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಪರೀಕ್ಷಾ ಕೇಂದ್ರಗಳಿಗೆ ಬಸ್‌ಗಳಲ್ಲಿ ಉಚಿತವಾಗಿ ಹೋಗಿ ಬರಬಹುದು. ಪರೀಕ್ಷೆ ಇರುವ ದಿನದಂದು ಪರೀಕ್ಷಾ ಕೇಂದ್ರದ ಬಳಿ ವಿದ್ಯಾರ್ಥಿಗಳು ಬಸ್‌ ಹತ್ತಲು ಮತ್ತು ಇಳಿಯಲು ಅನುಕೂಲ ಆಗುವಂತೆ ಕೋರಿಕೆ ನಿಲುಗಡೆಯನ್ನೂ ನೀಡಲು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT