ADVERTISEMENT

ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಕೇಕೆ, ಗಡಿಜಿಲ್ಲೆಗಳಲ್ಲಿ ಹೈಅಲರ್ಟ್‌: ಸುಧಾಕರ್

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2021, 9:54 IST
Last Updated 19 ಫೆಬ್ರುವರಿ 2021, 9:54 IST
   

ಚಿಕ್ಕಬಳ್ಳಾಪುರ: ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಿರುವುದರಿಂದ ರಾಜ್ಯದ ಗಡಿನಾಡು ಜಿಲ್ಲೆಗಳಲ್ಲಿ ಹೈ ಅಲರ್ಟ್‌ ಆಗಿರಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಿರುವ ವೃತ್ತಿಪರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಗಡಿ ರಾಜ್ಯಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆಯಾಗಿರುವುದರಿಂದ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನಾಳೆ ವಿಡಿಯೊ ಸಂವಾದ ನಡೆಸಲಾಗುತ್ತದೆ ಎಂದರು.

ADVERTISEMENT

‘ಕೊರೊನಾ ಸೋಂಕು ಇನ್ನೂ ಜೀವಂತವಾಗಿದೆ. ಕೊರೊನಾ ಲಸಿಕೆ ಇದೆ ಎಂದು ಮಾಸ್ಕ್ ಧರಿಸದಿದ್ದರೆ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಕಷ್ಟವಾಗುತ್ತದೆ. ಕೊರೊನಾ ಸೋಂಕು ಹೊರಟು ಹೋಗಿದೆ ಎನ್ನುವ ತಪ್ಪು ಕಲ್ಪನೆ ಬೇಡ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.