ADVERTISEMENT

ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸದಂತೆ ಹೈಕಮಾಂಡ್ ತಾಕೀತು: ರಾಮಲಿಂಗರೆಡ್ಡಿ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2021, 15:25 IST
Last Updated 20 ಫೆಬ್ರುವರಿ 2021, 15:25 IST
   


ಕುಶಾಲನಗರ (ಕೊಡಗು ಜಿಲ್ಲೆ): ‘ಚುನಾವಣೆಗೂ ಮೊದಲೇ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡದಂತೆ ಹೈಕಮಾಂಡ್‌ ತಾಕೀತು ಮಾಡಿದೆ’ ಎಂದು ಕೆ.ಪಿ.ಸಿ.ಸಿ ನಿಯೋಜಿತ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ ಅವರು ಇಲ್ಲಿ ಶನಿವಾರ ಹೇಳಿದರು. ‌

‘ಕಾಂಗ್ರೆಸ್‌ ಮುಖ್ಯಮಂತ್ರಿ ಅಭ್ಯರ್ಥಿ ಸಿದ್ದರಾಮಯ್ಯ ಅವರು ಎಂದು ಕೆಲವು ಶಾಸಕರು ಪ್ರಚಾರ ಮಾಡುತ್ತಿದ್ದಾರೆ’ ಎಂದು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯಿಸಿದರು.
‘ಮೀಸಲಾತಿ ಎಂಬುದು ಒಂದು ಜಾತಿಗೆ ಸೀಮಿತವಾಗಬಾರದು. ಪ್ರತಿ ಜಾತಿಯಲ್ಲೂ ಇರುವ ಬಡವರಿಗೆ ಮೀಸಲಾತಿ ಸೌಲಭ್ಯಗಳು ಸಿಗಬೇಕು’ ಎಂದು ಪ್ರತಿಪಾದಿಸಿದರು.

ಕೇಂದ್ರ ಸರ್ಕಾರವು ಜನವಿರೋಧಿ ಯೋಜನೆ ಜಾರಿಗೆ ತರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.