ADVERTISEMENT

ಮೇಕೆದಾಟಿನಿಂದ ವಿಧಾನಸೌಧಕ್ಕೆ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 21:14 IST
Last Updated 20 ಸೆಪ್ಟೆಂಬರ್ 2021, 21:14 IST

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಮೇಕೆದಾಟಿನಿಂದ ವಿಧಾನಸೌಧದ ತನಕ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಮೇಕೆದಾಟು ಹೋರಾಟ ಸಮಿತಿ ತಿಳಿಸಿದೆ.

ಸೆ.23 ರಿಂದ 28ರವರೆಗೆ ಐದು ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಸಂಪತ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಮೇಕೆದಾಟು ಯೋಜನೆಯಿಂದ ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಯ ಜನರಿಗೆ ಕುಡಿಯುವ ನೀರು ಸಿಗಲಿದೆ. ಸರ್ಕಾರ ಈ ಯೋಜನೆ ಜಾರಿಗೆ ಮುಂದಾಗಬೇಕು’ ಎಂದು ಮನವಿ ಮಾಡಿದರು.

ADVERTISEMENT

‘ಕನ್ನಡ ಸಂಘಟನೆಗಳು, ದಲಿತ ಸಂಘಟನೆಗಳು, ರೈತ ಕಾರ್ಮಿಕ, ವಕೀಲ, ವಿದ್ಯಾರ್ಥಿ ಮತ್ತು ಮಹಿಳಾ ಸಂಘಟನೆಗಳು ಪಾದಯಾತ್ರೆಯಲ್ಲಿ ಭಾಗವಹಿಸಲಿವೆ. ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಆಡಳಿತವಿದೆ. ಆದರೂ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಇನ್ನೂ ಅನುಮೋದನೆ ಸಿಕ್ಕಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.