ADVERTISEMENT

2ಎ ಮೀಸಲಾತಿ ದೊರೆಯದೆ ಪೀಠಕ್ಕೆ ಮರಳುವುದಿಲ್ಲ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2021, 7:17 IST
Last Updated 21 ಫೆಬ್ರುವರಿ 2021, 7:17 IST
   

ಬೆಂಗಳೂರು:ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ದೊರೆಯುವವರೆಗೂ ಪೀಠಕ್ಕೆ ಮರಳುವುದಿಲ್ಲ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಭಾನುವಾರ ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪಂಚಮಸಾಲಿ ಸಮಾವೇಶದಲ್ಲಿ ಹಕ್ಕೊತ್ತಾಯ ಮಂಡಿಸಿ ಮಾತನಾಡಿದ ಅವರು, 'ಪಂಚಮಸಾಲಿ ಸಮುದಾಯಕ್ಕೆ ನಿಗಮ, ಅನುದಾನ ಯಾವುದೂ ಬೇಡ. ಹಿಂದುಳಿದ ವರ್ಗಗಳ ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಮಾತ್ರ ಬೇಕು' ಎಂದರು.

ಸಮಾವೇಶ ಮುಗಿಯುವುದರೊಳಗೆ ಸರ್ಕಾರದ ಕಡೆಯಿಂದ ಪೂರಕ ಸಂದೇಶ ಬರಲಿದೆ ಎಂಬ ನಿರೀಕ್ಷೆ ಇದೆ. ಅದು ಆಗದಿದ್ದರೆ ವಿಧಾನಸೌಧದ ಎದುರು ಧರಣಿ ಆರಂಭಿಸುತ್ತೇವೆ. ಅದಕ್ಕೂ ಮಣಿಯದಿದ್ದರೆ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ ಎಂದು ಸ್ವಾಮೀಜಿ ಘೋಷಿಸಿದರು.

ADVERTISEMENT

ಎಚ್.ಡಿ. ‌ದೇವೇಗೌಡರು ಮುಖ್ಯಮಂತ್ರಿ ಆಗಿದ್ದಾಗ ಅವರ ಸಮುದಾಯಕ್ಕೆ ಮೀಸಲಾತಿ ನೀಡಿದರು. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಹಲವು ಸಮುದಾಯಗಳಿಗೆ ಮೀಸಲಾತಿ ಕೊಟ್ಟರು. ಪಂಚಮಸಾಲಿ ಸಮುದಾಯಕ್ಕೆ ಯಡಿಯೂರಪ್ಪ ಅವರಲ್ಲದೇ ಯಾರು ಮೀಸಲಾತಿ ಕೊಡುತ್ತಾರೆ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.