ADVERTISEMENT

ಸಿಕ್ಕಿತೇ ಹೈಕಮಾಂಡ್ ಸಂದೇಶ..? ಕಾದು ನೋಡೋಣ ಎಂದ ಸಿಎಂ ಬಿಎಸ್‌ವೈ

'ನಾಯಕತ್ವದ ತೀರ್ಮಾನಕ್ಕೆ ಬದ್ಧವಾಗಿ ಕೆಲಸ ಮಾಡುತ್ತೇವೆ'

​ಪ್ರಜಾವಾಣಿ ವಾರ್ತೆ
Published 25 ಜುಲೈ 2021, 11:06 IST
Last Updated 25 ಜುಲೈ 2021, 11:06 IST
ಯಡಿಯೂರಪ್ಪ
ಯಡಿಯೂರಪ್ಪ   

ಬೆಳಗಾವಿ: ‘ನಮ್ಮ ಪಕ್ಷದಲ್ಲಿ ನಾನೊಬ್ಬನೇ ನಾಯಕ ಏನಲ್ಲ.ಅನೇಕ ಹಿರಿಯ ನಾಯಕರು ಇದ್ದಾರೆ. ನಾಯಕತ್ವದ ತೀರ್ಮಾನಕ್ಕೆ ಬದ್ಧವಾಗಿ ಕೆಲಸ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲೂ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ’ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನೂರು ಜನರಂತಹ ಸಿದ್ದರಾಮಯ್ಯ ಬಂದರೂ ನಾವು ಅಧಿಕಾರಕ್ಕೆ ಬರುವುದನ್ನು ತಡೆಯಲಾಗುವುದಿಲ್ಲ’ ಎಂದು ಹೇಳಿದರು.

‘ಸಿದ್ದರಾಮಯ್ಯ ಹೇಳಿಕೆಗಳಿಗೆ ಪ್ರತಿಕ್ರಿಯೆ‌ ಕೊಡುವುದಕ್ಕೆ ಬಯಸುವುದಿಲ್ಲ. ಪಕ್ಷವನ್ನು ಮುಂದೆಯೂ ಅಧಿಕಾರಕ್ಕೆ ತರುವುದೊಂದೇ ನನ್ನ ಗುರಿಯಾಗಿದೆ’ ಎಂದರು.

ADVERTISEMENT

ಹೈಕಮಾಂಡ್‌ನಿಂದ ಸಂದೇಶ ಬಂದಿತೇ ಎಂಬ ಪ್ರಶ್ನೆಗೆ ಕಾದು ನೋಡೋಣ, ಕಾದು ನೋಡೋಣ ಎಂದಷ್ಟೇ ಹೇಳಿದರು.

ಇದಕ್ಕೂ ಮುನ್ನ ಬೆಳಗಾವಿಜಿಲ್ಲೆಯಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದರು.

ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್.ಅಶೋಕ್, ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಬಳಿಕ ಮಾತನಾಡಿದ ಯಡಿಯೂರಪ‍್ಪಅವರು,ಉತ್ತರ ಕನ್ನಡ ಜಿಲ್ಲೆಗೆ ಜುಲೈ 26ರಂದು ಭೇಟಿ ನೀಡಿ, ಪ್ರವಾಹ ಪರಿಸ್ಥಿತಿ ಪರಿಶೀಲಿಸುತ್ತೇನೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.