ADVERTISEMENT

ಕಲಬುರಗಿ: ಅಕ್ರಮ ಹಣ ಸಾಗಾಟ, ಅಂದಾಜು ₹ 1.90 ಕೋಟಿ ವಶ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2023, 16:47 IST
Last Updated 22 ಮಾರ್ಚ್ 2023, 16:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಲಬುರಗಿ: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸ್ಥಾಪಿಸಲಾದ ಚೆಕ್ ಪೋಸ್ಟ್ ಗಳಲ್ಲಿ ಬುಧವಾರ ಯಾವುದೇ ದಾಖಲೆ ಇಲ್ಲದ ಅಂದಾಜು ₹ 1.90 ಕೋಟಿ ಹಣ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ.‌ ಗುರುಕರ್ ತಿಳಿಸಿದ್ದಾರೆ.

ಇದರಲ್ಲಿ ಕಮಲಾಪುರ ತಾಲ್ಲೂಕಿನ ಕಿಣ್ಣಿಸಡಕ್ ಚೆಕ್ ಪೋಸ್ಟ್ ಬಳಿ ₹ 1.40 ಕೋಟಿ, ಜೇವರ್ಗಿ ಚೆಕ್ ಪೋಸ್ಟ್ ನಲ್ಲಿ ₹ 50 ಲಕ್ಷ ವಶಕ್ಕೆ ಪಡೆಯಲಾಗಿದೆ.

ವಶಕ್ಕೆ ಪಡೆಯಲಾದ ಹಣವನ್ನು ಅಧಿಕಾರಿಗಳು ಲೆಕ್ಕ‌ ಮಾಡುವಲ್ಲಿ ನಿರತವಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.