ADVERTISEMENT

Karnataka Covid-19 Update: ರಾಜ್ಯದಲ್ಲಿಂದು 946 ಮಂದಿ ಕೋವಿಡ್‌ನಿಂದ ಗುಣಮುಖ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 14:28 IST
Last Updated 22 ಸೆಪ್ಟೆಂಬರ್ 2021, 14:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಪುನಃ ಏರಿಕೆಯಾಗುತ್ತಿದ್ದು ಬುಧವಾರ 847 ಮಂದಿಗೆ ಕೋವಿಡ್‌ ಸೋಂಕು ಹರಡಿರುವುದು ದೃಢವಾಗಿದೆ. ಒಟ್ಟು 1,46,772 ಮಂದಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿದೆ.

ಬೆಂಗಳೂರು ನಗರದಲ್ಲಿ 6 ಮಂದಿ, ದಕ್ಷಿಣ ಕನ್ನಡದಲ್ಲಿ 5 ಮಂದಿ ಸೇರಿದಂತೆ ಒಟ್ಟು 20 ಮಂದಿ ಮೃತಪಟ್ಟಿದ್ದಾರೆ. ಸಾವಿನ ಪ್ರಮಾಣ ಶೇ 2.36 ಇದ್ದು, ಇದುವರೆಗೆ 37,668 ಮಂದಿ ಕೊರೊನಾ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ.

ಒಟ್ಟು 946 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಇದುವರೆಗೆ ಕೋವಿಡ್‌ನಿಂದ ಗುಣಮುಖರಾದವರ ಸಂಖ್ಯೆ 29,18,890ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 13,621 ಸಕ್ರಿಯ ಕೋವಿಡ್‌ ಪ್ರಕರಣಗಳಿವೆ. ಇದರ ಶೇಕಡಾವಾರು ಪ್ರಮಾಣ 0.57 ಇದೆ.

ADVERTISEMENT

ಬೆಂಗಳೂರು ನಗರದಲ್ಲಿ 312 ಮಂದಿಗೆ ಕೋವಿಡ್‌ ದೃಢ ಪಟ್ಟಿದ್ದು, ದಕ್ಷಿಣ ಕನ್ನಡದಲ್ಲಿ 118 ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಮೈಸೂರಲ್ಲಿ 74 ಮಂದಿಗೆ ಕೋವಿಡ್‌ ತಗುಲಿದ್ದೇ ಗರಿಷ್ಠ ಪ್ರಮಾಣವಾಗಿದೆ. ಶಿವಮೊಗ್ಗದಲ್ಲಿ 52, ಉಡುಪಿಯಲ್ಲಿ 48, ಹಾಸನದಲ್ಲಿ 46 ಹಾಗೂ ಚಿಕ್ಕಮಗಳೂರಲ್ಲಿ 31 ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಕೋವಿಡ್‌ ಸಂಖ್ಯೆ 30ನ್ನು ದಾಟಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.